ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

Upayuktha
0


ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

   

ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ 1,00,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. 

  

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ 0820-2574978 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top