ಉಡುಪಿ: ಹುಬ್ಬಳ್ಳಿ-ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಆರನೆಯ ಶಿಕ್ಷಕ ಸಾಹಿತಿಗಳ ರಾಜ್ಯಮಟ್ಟದ ಸಮ್ಮೇಳನ ಸರ್ವಾಧ್ಯಕ್ಷರಾಗಿ ಉಡುಪಿಯ ಹಿರಿಯ ಶಿಕ್ಷಕ ಸಾಹಿತಿ ನೆಂಪು ನರಸಿಂಹ ಭಟ್ಟರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ರಾಜ್ಯ ಪ್ರಶಸ್ತಿ ಪುರಸ್ಕೃತ ರಾದ ನೆಂಪು ಹತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ ಹಿರಿಯ ಚಿಂತಕರು,ಸೆಪ್ಟೆಂಬರ್ 5 ರಂದು ಅಂಬಲ್ ಪಾಡಿ ದೇವಸ್ಥಾನ ಸಭಾಂಗಣ ದಲ್ಲಿ ಸಮ್ಮೇಳನ ಜರುಗಲಿದ್ದು, ರಾಜ್ಯದ ಆಸಕ್ತ ಶಿಕ್ಷಕ ಸಾಹಿತಿಗಳು ಪಾಲ್ಗೊಳ್ಳಲು ಅವಕಾಶ ಇದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ