ತೆಂಕನಿಡಿಯೂರು ಕಾಲೇಜು : ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ರಕ್ತದಾನ ಶಿಬಿರ

Upayuktha
0


ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ಜಿಲ್ಲಾಡಳಿತ ಉಡುಪಿ, ಯುವ ಸಬಲೀಕರಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ ಹಾಗೂ ಲಯನ್ಸ್ ಕ್ಲಬ್ ಅಮೃತ್ ಉಡುಪಿ ಇದರ ಸಹಯೋಗದಲ್ಲಿ ರಾಷ್ಟ್ರೀಯ ರೆಡ್‍ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ದೈಹಿಕ ಶಿಕ್ಷಣ ಇಲಾಖೆಯ ನೇತೃತ್ವದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಡಾ. ಕೆ. ವಿದ್ಯಾ ಕುಮಾರಿ, ಮಾನ್ಯ ಉಡುಪಿ ಜಿಲ್ಲಾಧಿಕಾರಿಗಳು ಉದ್ಘಾಟಿಸಿದರು.  ವಿದ್ಯಾರ್ಥಿ ದಿಸೆಯಲ್ಲಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ಶ್ರದ್ಧೆ ಮತ್ತು ಕರ್ತವ್ಯ ನಿಷ್ಠೆಯನ್ನು ಪಾಲಿಸಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಂಡಲ್ಲಿ ಬದುಕಿನಲ್ಲಿ ಯಶಸ್ಸು ಮತ್ತು ಸ್ವಾವಲಂಬನೆ ಸಾಧ್ಯ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಇವರು ಕರೆಯಿತ್ತರು.


ಕಾಲೇಜು ಹಂತದಲ್ಲಿ ಯಾವುದೇ ಆಮಿಷಗಳಿಗೆ ಬಲಿ ಬೀಳದೇ ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವಲ್ಲಿ ಉತ್ತಮ ಪ್ರಜೆಯಾಗಿ ದೇಶಕ್ಕೆ ಕೊಡುಗೆ ನೀಡಲು ಸಾಧ್ಯ ಎಂದು ತಿಳಿ ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ಸುರೇಶ್ ರೈ ಕೆ. ವಹಿಸಿದ್ದರು.  ಡಾ. ವೀಣಾ ಜಿಲ್ಲಾ ಸರ್ಜನ್ ಇವರು ರಕ್ತದಾನದ ಮಹತ್ವವನ್ನು ಮತ್ತು ಅಗತ್ಯವನ್ನು ವಿವರಿಸಿದರು.  ಶ್ರೀಮತಿ ಭಾರತಿ ಎಚ್.ಎನ್. ಲಯನ್ ಅಮೃತ್ ಅಧ್ಯಕ್ಷರು ಹಾಗೂ ಬಸ್ರೂರು ರಾಜೀವ ಶೆಟ್ಟಿ, ರೆಡ್‍ಕ್ರಾಸ್ ಉಡುಪಿ ಜಿಲ್ಲಾಧ್ಯಕ್ಷರು ಉಪಸ್ಥಿತರಿದ್ದರು.  ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮದ ಔಚಿತ್ಯದ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಡಾ. ಪ್ರಸಾದ್ ರಾವ್ ಎಂ. ವಂದಿಸಿದರು.  ಶ್ರೀ ಪ್ರಶಾಂತ್ ನೀಲಾವರ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಹಾಕಿ ದಂತಕಥೆ ಮೇಜರ್ ಧ್ಯಾನ್‍ಚಂದ್ ಭಾವಚಿತ್ರಕ್ಕೆ ಪುಷ್ಪಾಂಜಲಿಗೈದು ಸ್ಮರಿಸಲಾಯಿತು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top