ಉಡುಪಿ: ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಮತ್ತು ಆರ್.ಸಿ.ಸಿ ಮೂಡಗಿಳಿಯಾರು ಸಮುದಾಯ ಆರೋಗ್ಯ ಕೇಂದ್ರ, ಕೋಟ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಮೂಡಗಿಳಿಯಾರು ಸರಕಾರಿ ಸಂಯುಕ್ತ ಪ್ರೌಢಶಾಲೆ ವಠಾರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಮಾಹಿತಿ ಕಾರ್ಯಾಗಾರ ನಡೆಯಿತು.
ಸಮುದಾಯ ಆರೋಗ್ಯ ಕೇಂದ್ರ ಕೋಟದ ಆಡಳಿತ ವೈದ್ಯಾಧಿಕಾರಿ ಡಾ. ವಿಶ್ವನಾಥ್ ಕಾರ್ಯಕ್ರಮ ಉದ್ಘಾಟಿಸಿ, ಮಾಹಿತಿ ನೀಡಿದರು. ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ ಅಧ್ಯಕ್ಷ ರೊ. ದೇವಪ್ಪ ಪಟಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸರಕಾರಿ ಸಂಯುಕ್ತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶಿವರಾಮ ಭಟ್, ಆರ್.ಸಿ.ಸಿ ಮೂಡಗಿಳಿಯಾರು ಉಪಾಧ್ಯಕ್ಷ ವಿಜಯಕುಮಾರ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ರಮೇಶ್, ಕೋಟ ಸಾಲಿಗ್ರಾಮ ರೋಟರಿ ಕ್ಲಬ್ ಕಾರ್ಯದರ್ಶಿ ರೊ.ತಿಮ್ಮ ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಹರಿಚಂದ್ರ ನಾಯಕ ಸ್ವಾಗತಿಸಿ, ಸಮುದಾಯ ಆರೋಗ್ಯ ಅಧಿಕಾರಿ ವಾರಿಜ ನಿರೂಪಿಸಿ, ಮಂದಾ ನಾಯ್ಕ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ