ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Chandrashekhara Kulamarva
0

 ‘ಎಂ ಜಿ ಐ ಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು’ ವಿಷಯ ಕುರಿತು 

 


ಉಜಿರೆ: ಮಹಾರಾಷ್ಟ್ರದ ಮಹಾತ್ಮ ಗಾಂಧಿ ಇನ್ಸ್ಟಿಟ್ಯೂಟ್ ಫಾರ್ ರೂರಲ್ ಇಂಡಸ್ಟ್ರಿಯಲೈಸೇಶನ್ (ಎಂ ಜಿ ಐ ಆರ್ ಐ) ಸಂಸ್ಥೆಯ ವತಿಯಿಂದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎಸ್.ಡಿ.ಎಂ.-ರೋಟರಿ ಕರಿಯರ್ ಗೈಡೆನ್ಸ್ ಮತ್ತು ಪ್ಲೇಸ್ಮೆಂಟ್ ಸೆಂಟರ್ ಹಾಗೂ ಎಸ್.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯ (ಎಸ್.ಡಿ.ಎಂ.ಐ.ಟಿ., ಉಜಿರೆ) ಸಹಯೋಗದಲ್ಲಿ ‘ಎಂ ಜಿ ಐ ಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು’ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರವು ಉಜಿರೆ ಎಸ್.ಡಿ.ಎಂ. ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಆ.12ರಂದು ನಡೆಯಲಿದೆ.


ಬೆಳ್ತಂಗಡಿಯ ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ್ ಕೆ.ಎನ್. ಅವರು ಬೆಳಗ್ಗೆ 10ಕ್ಕೆ ಉದ್ಘಾಟನೆ ನೆರವೇರಿಸಲಿದ್ದಾರೆ. ಎಂ.ಜಿ.ಐ.ಆರ್.ಐ. ಸಂಸ್ಥೆಯ ನಿರ್ದೇಶಕ ಡಾ. ಅಶುತೋಷ್ ಎ. ಮುರ್ಕುಟೆ ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.


ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಉಜಿರೆಯ ರುಡ್’ಸೆಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ್, ಎಂ.ಜಿ.ಐ.ಆರ್.ಐ. ಸಂಸ್ಥೆಯ ಪ್ರಧಾನ ವೈಜ್ಞಾನಿಕ ಅಧಿಕಾರಿ (ಖಾದಿ ಮತ್ತು ಜವಳಿ) ಎಚ್.ಡಿ. ಸಿನ್ನೂರ್ ಹಾಗೂ ಉಜಿರೆ ಎಸ್.ಡಿ.ಎಂ.ಐ.ಟಿ. ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)
To Top