ಅಗಸ್ಟ್ 15ರಂದು ಕಲ್ಮಾಡಿ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ

Upayuktha
0
ಒಂಬತ್ತು ದಿನಗಳ ನವೇನಾ ಪ್ರಾರ್ಥನೆಗಳು ನಾಳೆಯಿಂದ


ಉಡುಪಿ: ಕಲ್ಮಾಡಿ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರವು ಪ್ರಪಂಚದಾದ್ಯಂತ ಬಹಳ ಪ್ರಸಿದ್ಧವಾಗಿದೆ. ವೆಲಂಕಣಿ ಮಾತೆಯ ಪ್ರತಿಮೆಯನ್ನು ತಮಿಳುನಾಡಿನ ವೆಲಂಕಣಿ ಪುಣ್ಯಕ್ಷೇತ್ರದಿಂದ ತಂದು ಕಲ್ಮಾಡಿಯ ಸ್ಟೆಲ್ಲಾ ಮಾರಿಸ್ ದೇವಾಲಯದಲ್ಲಿ ಅಗಸ್ಟ್ 15, 1988ರಲ್ಲಿ ಅಂದಿನ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿದ್ದ ಅತೀ ವಂದನೀಯ ಡಾ. ಬಾಸಿಲ್ ಡಿʼಸೋಜಾ ರವರು ಪ್ರತಿಷ್ಠಾಪಿಸಿದರು. ಅಂದಿನಿಂದ ಇಂದಿನವರೆಗೂ ವೆಲಂಕಣಿ ಮಾತೆಯ ಸ್ಮರಣೆ ನಿರಂತರವಾಗಿ ಈ ಕೇಂದ್ರದಲ್ಲಿ ನಡೆಯುತ್ತಿದೆ ಹಾಗೂ ಪ್ರತಿದಿನ ಹಲವಾರು ಭಕ್ತಾದಿಗಳು ಇಲ್ಲಿಗೆ ಭೇಟಿ ನೀಡುತ್ತಿದ್ದು ಅನೇಕ ಪವಾಡಗಳಿಗೆ ಸಾಕ್ಷಿಯಾಗಿದ್ದಾರೆ.


ಸ್ಟೆಲ್ಲಾ ಮಾರಿಸ್ ದೇವಾಲಯ ಕಲ್ಮಾಡಿ ಇಲ್ಲಿರುವ ವೆಲಂಕಣಿ ಮಾತೆಯ ಕೇಂದ್ರವನ್ನು 15 ಅಗಸ್ಟ್ 2022 ರಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೋ ರವರು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವಾಗಿ ಘೋಷಿಸಿದರು.


ಪ್ರತಿ ವರ್ಷದಂತೆ ಈ ಬಾರಿ ಕೂಡ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು 15 ಅಗಸ್ಟ್ 2023 ಮಂಗಳವಾರದಂದು ನಡೆಯಲಿರುವುದು.


ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಒಂಬತ್ತು ದಿನಗಳ ನವೇನಾ ಪ್ರಾರ್ಥನೆಗಳು ತಾರೀಕು 06-08-2023 ರಿಂದ 14-08-2023 ರ ವರೆಗೆ ಸಾಯಂಕಾಲ 4:00 ಗಂಟೆಗೆ ನಡೆಯಲಿರುವುದು.


ತಾರೀಕು 06-08-2023 ಭಾನುವಾರದಂದು ಸಾಯಂಕಾಲ 3:45 ಗಂಟೆಗೆ ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜೆರಾಲ್ ಆಗಿರುವ ಮೊನ್ಸಿ. ಫರ್ಡಿನಾಂಡ್ ಗೊನ್ಸಾಲ್ವಿಸ್ ರವರು ನವೇನಾ ಪ್ರಾರ್ಥನೆಗಳಿಗೆ ಚಾಲನೆ ನೀಡಲಿರುವರು.


ತಾರೀಕು 13-08-2023 ಭಾನುವಾರದಂದು ಮಧ್ಯಾನ್ಹ 2:30 ಗಂಟೆಗೆ ಆದಿಉಡುಪಿ ಜಂಕ್ಷನ್ ನಿಂದ ಕಲ್ಮಾಡಿ ದೇವಾಲಯದ ವರೆಗೆ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ನಡೆಯಲಿರುವುದು. ಅಂದು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾಗಿರುವ ಅತೀ ವಂದನೀಯ ಡಾ. ಲುವಿಸ್ ಪಾವ್ಲ್ ಡಿʼಸೋಜಾ ರವರು ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ಚಾಲನೆ ನೀಡಲಿರುವರು.


15 ಅಗಸ್ಟ್ 2023 ಮಂಗಳವಾರದಂದು ಬೆಳಗ್ಗೆ 10:00 ಗಂಟೆಗೆ ದಿವ್ಯ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಲೋ ರವರು ನೆರೆವೇರಿಸಲಿರುವರು. ಉಡುಪಿ ಧರ್ಮಪ್ರಾಂತ್ಯದ ಅನೇಕ ಧರ್ಮಗುರುಗಳು ಹಾಗೂ ಸಾವಿರಾರು ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವರು. ಅಂದು ಮಧ್ಯಾನ್ಹ 2:00 ಗಂಟೆಗೆ, 4:00 ಗಂಟೆಗೆ ಹಾಗೂ ಸಾಯಂಕಾಲ 6:00 ಗಂಟೆಗೆ ಕೊಂಕಣಿ ಭಾಷೆಯಲ್ಲಿ ಇತರೆ ಬಲಿಪೂಜೆಗಳನ್ನು ಆಯೋಜಿಸಲಾಗಿದೆ.


ಕಲ್ಮಾಡಿ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರದ ರೆಕ್ಟರ್ ವಂ. ಬ್ಯಾಪ್ಟಿಸ್ಟ್ ಮಿನೇಜಸ್ ಅವರು ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top