ಮಂಗಳೂರು: ಮಕ್ಕಳ ಜೊತೆ 75 ನೇ ಹುಟ್ಟುಹಬ್ಬ ಆಚರಿಸಿದ ಖ್ಯಾತ ನಟ ಅನಂತನಾಗ್

Upayuktha
0

ಮಂಗಳೂರು: ದಿವ್ಯಾಂಗ ಮಕ್ಕಳನ್ನು ಬಹಳ ಪ್ರೀತಿಯಿಂದ ಸಲಹಿ, ಅವರ ಸರ್ವತ್ತೋಮುಖ ಬೆಳವಣಿಗೆಗೆ ಶ್ರಮಿಸುತ್ತಿರುವ ಅನಿರ್ವೇದ ಫೌಂಡೇಶನ್ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಖ್ಯಾತ ನಟ ಅನಂತನಾಗ್ ಹೇಳಿದರು.


ಅವರು ಕದ್ರಿ ಶಿವಭಾಗ್ ನಲ್ಲಿರುವ ಅನಿರ್ವೇದ ಫೌಂಡೇಶನ್ ಇದರ ಸ್ಥಳಾಂತರಿತ ನೂತನ ಕಟ್ಟಡ ಉದ್ಘಾಟಿಸಿ,  ವಿಶೇಷ ಚೇತನ ಮಕ್ಕಳ ಜೊತೆಗೂಡಿ ತಮ್ಮ 75 ನೇ ಜನ್ಮದಿನವನ್ನು ಆಚರಿಸಿದರು. 


ಮಕ್ಕಳೊಂದಿಗೆ ಕೇಕ್ ಕಟ್ ಮಾಡಿ ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡ ಅನಂತನಾಗ್ ಅವರು ಮಕ್ಕಳಲ್ಲಿಯೇ ದೇವರನ್ನು ಕಾಣಬೇಕೆಂಬ ಉದಾತ್ತ ಚಿಂತನೆಯನ್ನು ಆನಂದಾಶ್ರಮದಲ್ಲಿ ತಮ್ಮ ಗುರುಗಳು ಹೇಳಿಕೊಟ್ಟಿದ್ದರು. ಇಂತಹ ದಿವ್ಯಾಂಗ ಮಕ್ಕಳಿಗೆ ದಾರಿದೀಪವಾಗಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ. ಶ್ವೇತಾ ಅವರು ಮಕ್ಕಳ ಬಾಳಿನಲ್ಲಿ ದೇವರ ರೂಪವಾಗಿ ಬಂದಿದ್ದೀರಿ. ನಿಮ್ಮ ಸೇವೆ ಇನ್ನಷ್ಟು ದಿವ್ಯ ಚೇತನ  ಮಕ್ಕಳಲ್ಲಿ ಬೆಳಕಾಗಿ ಬರಲಿ. ಈ ಸಂಸ್ಥೆಯ ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು. 


ಡಾ. ಶ್ವೇತ ಅವರು ಸಂಸ್ಥೆಯ ಬೆಳವಣಿಗೆಗೆ ಸಹಕರಿಸಿದ ಎಲ್ಲರನ್ನು  ವಂದಿಸಿದರು. ಕಾರ್ಪೋರೇಟರ್ ನವೀನ್ ಡಿಸೋಜಾ ಪಾಲಿಕೆ ಮತ್ತು ವೈಯಕ್ತಿಕವಾಗಿ ಸಂಸ್ಥೆಗೆ ಅಗತ್ಯ ನೆರವನ್ನು ನೀಡಲು ಬದ್ಧ ಎಂದು ತಿಳಿಸಿದರು. ಡಾ. ರವಿಚಂದ್ರ ಶುಭ ಹಾರೈಸಿದರು.


ಅನಂತನಾಗ್ ಪತ್ನಿ ಗಾಯತ್ರಿ ನಾಗ್, ಮಗಳು ಅದಿತಿ, ಅಳಿಯ ವಿವೇಕ್, ಆತ್ಮೀಯರಾದ ಮಂಗಲ್ಪಾಡಿ ನರೇಶ್ ಶೆಣೈ, ಅಂಜನಾ ಕಾಮತ್ ಹಾಗೂ ಸಂಸ್ಥೆಯ ಮಕ್ಕಳ ಪೋಷಕರು, ಹಿತೈಷಿಗಳು ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top