ಅ.ಭಾ. ಸಾಹಿತ್ಯ ಪರಿಷತ್‌ನಿಂದ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ

Upayuktha
0


ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ದ.ಕ. ಸಮಿತಿ ವತಿಯಿಂದ ರಾಷ್ಟ್ರೋತ್ಥಾನ ಪರಿಷತ್‌ನ ಶಿಕ್ಷಣ ಸಂಸ್ಥೆ ತೊಕ್ಕೊಟ್ಟುವಿನ ಮಂಗಳೂರು ವನ್ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಗ್ರಂಥಾಲಯಕ್ಕೆ 150 ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು.


ಅಭಾಸಾಪ ಜಿಲ್ಲಾಧ್ಯಕ್ಷ ಪಿ.ಬಿ. ಹರೀಶ್ ರೈ ಅವರು ವಿದ್ಯಾಕೇಂದ್ರದ ಪ್ರಾಂಶುಪಾಲೆ ವಿದ್ಯಾ ಕಾಮತ್ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸಿದರು. ದಾನಿಗಳಿಂದ ಉಪಯುಕ್ತ ಪುಸ್ತಕಗಳನ್ನು ಸಂಗ್ರಹಿಸಿ ಶಾಲಾ ಗ್ರಂಥಾಲಯಗಳಿಗೆ ನೀಡುವ ಕಾರ್ಯಕ್ರಮವನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದ.ಕ. ಸಮಿತಿ ಹಮ್ಮಿಕೊಂಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಲೆಗಳಿಗೆ ಪುಸ್ತಕಗಳನ್ನು ನೀಡಲಾಗುವುದು ಎಂದು ಅವರು ಈ ಸಂದರ್ಭ ತಿಳಿಸಿದರು.


ಮುಖ್ಯ ಅತಿಥಿಯಾಗಿದ್ದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ,  'ಮಾನವನ ಜೀವನದಲ್ಲಿ ಪುಸ್ತಕಗಳು ಪ್ರಮುಖ ಪಾತ್ರ ವಹಿಸುತ್ತದೆ. ಜ್ಞಾನಾಭಿವೃದ್ಧಿಗೆ ಗ್ರಂಥಾಲಯ ಬಹಳ ಮುಖ್ಯ. ಶಾಲಾ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡುವ ಕಾರ್ಯ ಶ್ಲಾಘನೀಯ ಎಂದರು.


ಉದ್ಯಮಿ ಕೆ.ನಾರಾಯಣ ಚೌಟ, ಅಭಾಸಾಪ ದ.ಕ. ಜಿಲ್ಲಾ ಸಮಿತಿಯ ಖಜಾಂಜಿ ಭಾಸ್ಕರ ರೈ ಕಟ್ಟ, ಕಾರ್ಯಕಾರಿ ಸಮಿತಿ ಸದಸ್ಯ ಕೃಷ್ಣ  ಡಿ.ಎಸ್. ವಿದ್ಯಾಕೇಂದ್ರದ ಉಪ ಪ್ರಾಂಶುಪಾಲೆ ನಯನ ಮಾತಾಜಿ, ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ  ಪ್ರಖ್ಯಾತ್ ರೈ, ಶಾಲಾ ಗ್ರಂಥ ಪಾಲಕಿ ನೀತಾ ಕುಮಾರಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top