ಪುತ್ತೂರು: ದ ಕ ಪದವಿ ಪೂರ್ವ ಶಿಕ್ಷಣ ಇಲಾಖೆ, ಮಂಗಳೂರು ಹಾಗೂ ಅಂಬಿಕಾ ಪದವಿ ಪೂರ್ವ ಕಾಲೇಜು, ನೆಲ್ಲಿಕಟ್ಟೆ, ಪುತ್ತೂರು ಇದರ ಸಹಯೋಗದಲ್ಲಿ 2023-24ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಶಟಲ್ ಬ್ಯಾಡ್‍ಮಿಂಟನ್ ಪಂದ್ಯಾಟವು ದಿ. 02/09/2023ರಂದು ‘ಸುದಾನ ಸ್ಪೋರ್ಟ್ಸ್ ಕ್ಲಬ್’, ಸಾಮೆತಡ್ಕ ಇಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಸುದಾನ ಸ್ಪೋರ್ಟ್ಸ್ ಕ್ಲಬ್‍ನ ಅಧ್ಯಕ್ಷರಾದ ಶ್ರೀ ಸಚ್ಚಿದಾನಂದ ಡಿ. ಅವರು ದೀಪ ಬೆಳಗಿಸುವುದರ ಮೂಲಕ ಪಂದ್ಯಾಕೂಟಕ್ಕೆ ಚಾಲನೆಯನ್ನು ನೀಡಿ ಕ್ರೀಡೆಯಿಂದ ಮನೋರಂಜನೆ, ದೈಹಿಕ ವ್ಯಾಯಾಮವು ಕೂಡ ಸಿಗುತ್ತದೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿದ್ದ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳ ಸಂಚಾಲಕರಾದ ಶ್ರೀ ಸುಬ್ರಹ್ಮಣ್ಯ ನಟ್ಟೋಜರು ಮಾತನಾಡಿ ದೇಶಕ್ಕೆ ಕೀರ್ತಿ ತರುವಂತಹ ಕ್ರೀಡಾಪಟುಗಳಾಗಿ ಹೊರಹೊಮ್ಮಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ನಂತರ ನಡೆದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಅಂಬಿಕಾ ವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಸುರೇಶ್ ಶೆಟ್ಟಿಯವರು ನೆರವೇರಿಸಿಕೊಟ್ಟು ಆತ್ಮಸ್ಥೈರ್ಯ, ದೃಢನಿರ್ಧಾರ, ದೈಹಿಕ ಆರೋಗ್ಯ ಕೂಡ ಕ್ರೀಡಾಪಟುಗಳಿಗೆ ಬಹು ಅಗತ್ಯ ಎಂದು ಹೇಳಿ ವಿಜೇತ ತಂಡಗಳಿಗೆ ಅಭಿನಂದಿಸಿದರು.
ಬಾಲಕರ ವಿಭಾಗದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡರೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡರೆ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಉಪನ್ಯಾಸಕರಾದ ಶ್ರೀ ಪ್ರದೀಪ್ ಕೆ ವೈ ಮತ್ತು ಶ್ರೀ ಭರತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ