ಮಂಗಳೂರು: ಬಿಜೆಪಿ ದಕ್ಷಿಣ ಮಂಡಲ ವತಿಯಿಂದ ಮತದಾರರ ಚೇತನ ಅಭಿಯಾನ, ಬಿಎಲ್‌ಎ 2 ಕಾರ್ಯಾಗಾರ

Upayuktha
0


ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿಎಲ್‌ಎ 2 ಗಳ ಕಾರ್ಯಾಗಾರ ಶ್ರೀ ಭುವನೇಂದ್ರ ಸಭಾಂಗಣದಲ್ಲಿ ಮಂಡಲ ಅಧ್ಯಕ್ಷರಾದ ವಿಜಯ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಜರುಗಿತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ ಅವರು, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಅಲ್ಪ ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದು, ಸೋಲಿಗೆ ಸಮಗ್ರವಾಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡದೇ ಇದ್ದದ್ದು ಕೂಡ ಒಂದು ಕಾರಣ ಎಂದು ಹೇಳಿದರು.


ಮಂಗಳೂರು ನಗರ ದಕ್ಷಿಣದ ಶಾಸಕರಾದ ಡಿ. ವೇದವ್ಯಾಸ ಕಾಮತ್ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಕೋವಿಡ್ -19 ಲಸಿಕೆಯ ಅಭಿವೃದ್ಧಿ, ಚಂದ್ರಯಾನ -3 ರ ಯಶಸ್ಸು, ಶಾಸಕಾಂಗ ಸಂಸ್ಥೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಮುಂತಾದ ಹಲವು ಕ್ರಮಗಳಿಂದ ಭಾರತದ ಭವ್ಯ ಭವಿಷ್ಯಕ್ಕೆ ನಾಂದಿ ಹಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಪಕ್ಷವು ಭಾರಿ ಬಹುಮತದಿಂದ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.


ಬಿಎಲ್‌ಎ 2 ಕಾರ್ಯಾಗಾರ ಜಿಲ್ಲಾ ಸಂಚಾಲಕರಾದ ದೇವದಾಸ್ ಶೆಟ್ಟಿ ಅವರು ಮತದಾರರ ಚೇತನ ಅಭಿಯಾನದ ಬಗ್ಗೆ ಮಾಹಿತಿಯನ್ನು ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಮಂಡಲ ಪ್ರಭಾರಿ ಶ್ರೀಮತಿ ಕಸ್ತೂರಿ ಪಂಜ ಅವರು ಸಂಘಟನಾತ್ಮಕ ವಿಷಯಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಮೋನಪ್ಪ ಭಂಡಾರಿ, ಮನಪಾ ಮಹಾಪೌರರಾದ ಸುಧೀರ್ ಶೆಟ್ಟಿ ಕಣ್ಣೂರ್, ಪಾಲಿಕೆ ಮುಖ್ಯ ಸಚೇತಕರಾದ ಪ್ರೇಮಾನಂದ ಶೆಟ್ಟಿ, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷರಾದ ನಿತಿನ್ ಕುಮಾರ್, ಬಿ ಎಲ್ ಎ 2 ಕಾರ್ಯಾಗಾರ ಮಂಡಲ ಸಂಚಾಲಕರಾದ ಮಹೇಶ್ ಜೋಗಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೆ, ಮಂಡಲ ಉಪಾಧ್ಯಕರಾದ ರಮೇಶ್ ಕಂಡೆಟ್ಟು, ಶ್ರೀಮತಿ ಮೀರಾ ಕರ್ಕೇರ, ದೀಪಕ್ ಪೈ, ಅಜಯ ಕುಲಶೇಖರ, ಕಿರಣ್ ರೈ, ರಮೇಶ್ ಹೆಗ್ಡೆ, ಮಂಡಲ ಪದಾಧಿಕಾರಿಗಳು, ಮಂಡಲದ ಜಿಲ್ಲಾ ಪದಾಧಿಕಾರಿಗಳು ಮನಪಾ ಸದಸ್ಯರು, ಮಹಾ ಶಕ್ತಿ ಕೇಂದ್ರ ಪದಾಧಿಕಾರಿಗಳು ವಿವಿಧ ಮೋರ್ಚಾಗಳ ಹಾಗೂ ಪ್ರಕೋಷ್ಠಗಳ ಪದಾಧಿಕಾರಿಗಳು, ಶಕ್ತಿಕೇಂದ್ರ ಪ್ರಮುಖರು, ಬೂತ್ ಅಧ್ಯಕ್ಷರು ಬೂತ್ ಬಿಎಲ್‌ಎ 2 ಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top