ಬದಿಯಡ್ಕ: ಬದಿಯಡ್ಕದ ಶ್ರೀ ಗಣೇಶ ಮಂದಿರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ 52ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.18ರಿಂದ 20ರ ವರೆಗೆ ಮೂರು ದಿನಗಳ ಕಾಲ ವೈಭವದಿಂದ ನೆರವೇರಿತು.
ಕರಿಂಬಿಲ ಲಕ್ಷ್ಮಣ ಪ್ರಭು ಅವರ ಅಧ್ಯಕ್ಷತೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಉತ್ಸವ ನಡೆಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ- 'ಕೇರಳ ಸ್ಟೋರಿ' ಕುರಿತ ನಿಮ್ಮ ಅನಿಸಿಕೆಗಳ ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಅಲ್ಲದೆ ಹಿರಿಯ ಪ್ರಾಥಮಿಕ, ಹೈಸ್ಕೂಲ್ ಮತ್ತು ಸಾರ್ವಜನಿಕ ವಿಭಾಗಗಳಲ್ಲಿ ಪೆನ್ಸಿಲ್ ಡ್ರಾಯಿಂದ್ ಸ್ಪರ್ಧೆ, ಹೈಸ್ಕೂಲ್ ಹಾಗೂ ಸಾರ್ವಜನಿಕ ವಿಭಾಗದಲ್ಲಿ ಹೂ ಕಟ್ಟುವ ಸ್ಪರ್ಧೆಗಳು ನಡೆದವು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ