ಮಂಗಳೂರು: ಭಾರತ ಸರ್ಕಾರ ಯುವಜನ ಸೇವಾ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಕರ್ನಾಟಕ ವಿಭಾಗ ಇದರ ವತಿಯಿಂದ ರಾಷ್ಟ್ರೀಯ ನಾಯಕರಾದ ಮಹಾತ್ಮ ಗಾಂಧಿಜೀ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಇವರಿಗೆ ಗೌರವ ಸಲ್ಲಿಸಲು ಅಕ್ಟೋಬರ್ 2 ರಂದು ಸಂಸತ್ತಿನಲ್ಲಿ ಅಯೋಜಿಸಲಾಗುವ ಕಾರ್ಯಕ್ರಮ ಕ್ಕೆ ಮಂಗಳೂರಿನ ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ ಸೌರವ್ ಸಾಲಿಯಾನ್ ರವರು ಆಯ್ಕೆಯಾಗಿರುತ್ತಾರೆ.
ಇವರು ಮಂಗಳೂರಿನ ನೆಹರು ಯುವ ಕೇಂದ್ರದವರು ನಡೆಸಿದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿ, ರಾಜ್ಯ ನೆಹರು ಯುವ ಕೇಂದ್ರ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದೇಶದ ಬೇರೆ ಬೇರೆ ರಾಜ್ಯಗಳಿಂದ ಒಟ್ಟು 25 ಯುವಜನರನ್ನು ಆಯ್ಕೆ ಮಾಡಲಾಗಿದ್ದು ಅವರಲ್ಲಿ ಇವರು ಒಬ್ಬರಾಗಿದ್ದು, ಅಕ್ಟೋಬರ್ 2 ರಂದು ದೆಹಲಿಯ ಸಂಸತ್ತು ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ