ಉಜಿರೆ: ಕರ್ನಾಟಕದ ಉಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಆತನ ಸಹವರ್ತಿಗಳು ಪೊಲೀಸರ ಸಹಕಾರದೊಂದಿಗೆ ಅಲ್ಲಲ್ಲಿ ಬೀದಿಬದಿಗಳಲ್ಲಿ ಬಹಿರಂಗ ಸಭೆಗಳನ್ನು ನಡೆಸಿ ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕುಟುಂಬದವರ ಬಗ್ಗೆ ಆಧಾರ ರಹಿತ ಸುಳ್ಳು ಆರೋಪಗಳನ್ನು ಮಾಡಿ ಅಪಪ್ರಚಾರ ಮಾಡುವುದಲ್ಲದೆ ಸಮಾಜದ ಶಾಂತಿ, ಸಾಮರಸ್ಯ ಮತ್ತು ಸ್ವಾಸ್ಥ್ಯವನ್ನು ಕೆಡಿಸುತ್ತಿರುವುದು ಖಂಡನೀಯವಾಗಿದೆ. ಆತ ಈಗಾಗಲೇ ಉಡುಪಿ, ಕುಂದಾಪುರ, ಮಂಗಳೂರು ಮತ್ತು ಬೆಳ್ತಂಗಡಿಯಲ್ಲಿ ಪೊಲೀಸರ ಸಹಕಾರದಿಂದ ಬಹಿರಂಗ ಸಭೆ ನಡೆಸಿ ಸಮಾಜಕ್ಕೆ ತಪ್ಪು ಮಾಹಿತಿ ನೀಡಿರುತ್ತಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಪೊಲೀಸರು ತಕ್ಷಣ ಆತನ ಮೇಲೆ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಈ ಬಗ್ಗೆ ಮಂಗಳೂರಿನ ವಿದ್ಯಾನಗರ ನಿವಾಸಿ ಹರೀಶ್ ಶೆಟ್ಟಿ ಮತ್ತು ಸೋಮೇಶ್ವರದ ಸತೀಶ್ ದೀಪಂ ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಮತ್ತು ನ್ಯಾಯಾಲಯದ ಆದೇಶಗಳ ಪ್ರತಿಯನ್ನು ಸಲ್ಲಿಸಲಾಗಿದೆ.
ಸಂವಿಧಾನ, ಸರಕಾರ, ನ್ಯಾಯಾಲಯ ಹಾಗೂ ಪೊಲೀಸ್ ಇಲಾಖೆಯನ್ನು ಆತ ಬಹಿರಂಗ ಸಭೆಗಳಲ್ಲಿ, ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಆರೋಪಗಳನ್ನು ಪ್ರಸಾರ ಮಾಡುತ್ತಿರುವುದು ಖಂಡನೀಯವಾಗಿದ್ದು ಈ ಬಗ್ಗೆ ತಕ್ಷಣ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


