ಉಜಿರೆ: ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಕಸ ಸಂಗ್ರಹಣೆ, ಮೂಲದಲ್ಲಿಯೇ ಕಸ ವಿಂಗಡಣೆ, ವಿಲೇವಾರಿ ಮತ್ತು ಸ್ವಚ್ಛತಾ ಶ್ರಮದಾನ ಚಟುವಟಿಕೆಗಳನ್ನು ಮಾಡಲಾಗುತ್ತಿದ್ದು ಸಾರ್ವಜನಿಕರು ಪಾಲ್ಗೊಳ್ಳುವಂತೆ ದ.ಕ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎ.ಇ ಕರೆ ನೀಡಿದರು.
ಅವರು ಎಸ್.ಡಿ.ಎಂ ಕಾಲೇಜಿನ ರೇಡಿಯೋ ನಿನಾದ 90.4 FM ಸಮುದಾಯ ಬಾನುಲಿ ಕೇಂದ್ರದ ಸಂದರ್ಶನದಲ್ಲಿ ಪಾಲ್ಗೊಂಡು ಸ್ವಚ್ಛತಾ ಹಿ ಸೇವಾ ಆಂದೋಲನದ ಕುರಿತು ಮಾಹಿತಿ ಕಾರ್ಯಕ್ರಮದಲ್ಲಿ ಪಾಲ್ಕೊಂಡರು. ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಸಚಿವಾಲಯವು ಗ್ರಾಮಗಳಲ್ಲಿ ಸಂಪೂರ್ಣ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ, ಸ್ವಚ್ಛ ಭಾರತ್ ಯೋಜನೆಯಡಿಯಲ್ಲಿ ಈ ಅಭಿಯಾನ ಅ.2ರವರೆಗೆ ಮುಂದುವರಿಯಲಿದೆ. ಪ್ರತಿಯೊಂದು ಗ್ರಾಮದಲ್ಲೂ ಅತ್ಯಂತ ಹೆಚ್ಚು ತ್ಯಾಜ್ಯ ಸಂಗ್ರಹವಾಗುವ ಪ್ರದೇಶ, ಅಧಿಕ ಅನೈರ್ಮಲ್ಯ ಇರುವ ಸ್ಥಳ, ಬೀದಿ ಹಾಗೂ ಸ್ವಚ್ಛತೆ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ಸ್ವಚ್ಛಗೊಳಿಸಲು ಇಲಾಖೆ ಜೊತೆ ನಾಗರಿಕರು ಕೈಜೋಡಿಸಬೇಕೆಂದರು.
ಈ ವೇಳೆ ಪತ್ರಿಕೋಧ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಭಾಸ್ಕರ ಹೆಗ್ಡೆ, ಕಾಲೇಜಿನ ಕಚೇರಿ ಅಧೀಕ್ಷರಾದ ದಿವಾಕರ ಪಟವರ್ಧನ್, ಸಹಾಯಕ ಪ್ರಾಧ್ಯಾಪಕ ಸುನಿಲ್ ಹೆಗ್ಡೆ ಹಾಜರಿದ್ದರು. ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ಸಂಯೋಜಕ ವಿ.ಕೆ ಕಡಬ ಸಂದರ್ಶನ ನಡೆಸಿಕೊಟ್ಟರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ