ದೀಕ್ಷಾಭೂಮಿ ಯಾತ್ರೆಗೆ ಡಾ. ಬಿ.ಆರ್ ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ : ಅರ್ಜಿ ಆಹ್ವಾನ

Upayuktha
0


ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.    


ಕನಿಷ್ಟ 18 ವರ್ಷ ಮೇಲ್ಪಟ್ಟಿರುವ, ಡಾ.ಆರ್.ಅಂಬೇಡ್ಕರ್ ರವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜಸೇವೆ ಮಾಡಿದ ಅನುಭವ ಹೊಂದಿರುವ ಯಾತ್ರಾರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಯೊಂದಿಗೆ ಒಂದು ವಾರದ ಒಳಗಾಗಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಕಚೇರಿಗೆ ಸಲ್ಲಿಸಬಹುದಾಗಿದೆ. 


ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, 2 ನೇ ಮಹಡಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.  


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

'ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top