ಧರ್ಮಸ್ಥಳ: ಕೊಲ್ಲೂರು ಮತ್ತು ಕದ್ರಿಯಿಂದ ಮುಂದಿನ ತಿಂಗಳು ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣ ಯಾತ್ರೆ ಆಯೋಜಿಸಲಿದ್ದು, ಶುಕ್ರವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿ ಸನ್ನಿಧಿಯಲ್ಲಿ ಸಂಕಲ್ಪ ದಿನದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಕೊಲ್ಲೂರು ಮೂಕಾಂಬಿಕ ದೇವಸ್ಥಾನ ಮತ್ತು ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದಿಂದ ಪ್ರತ್ಯೇಕ ಎರಡು ರಥಗಳು ರಥಯಾತ್ರೆ ಆರಂಭಿಸಲಿವೆ. ಬಳಿಕ ನೇತ್ರಾವತಿ ಸ್ನಾನ ಘಟ್ಟದ ಮೂಲಕ ಧರ್ಮಸ್ಥಳಕ್ಕೆ ರಥಯಾತ್ರೆ ಸಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗುವುದು.
ಧರ್ಮಸ್ಥಳದಲ್ಲಿ ಮಾಣಿಲದ ಮೋಹನದಾಸ ಸ್ವಾಮೀಜಿ ನೇತೃತ್ವದಲ್ಲಿ ಶುಕ್ರವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಧರ್ಮಸ್ಥಳದ ವಿರುದ್ಧ ಮಾಡುವ ಅಪಪ್ರಚಾರ ಮತ್ತು ಸುಳ್ಳು ವದಂತಿ ತಡೆಗಟ್ಟುವುದೇ ರಥಯಾತ್ರೆಯ ಉದ್ದೇಶವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಂಕಲ್ಪ ದಿನದ ಅಂಗವಾಗಿ ರಥಯಾತ್ರೆ ಯಶಸ್ಸಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


