ಧರ್ಮಸ್ಥಳ: ನೇತ್ರಾವತಿಯಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

Upayuktha
0


ಧರ್ಮಸ್ಥಳ: ಮಹಾತ್ಮ ಗಾಂಧೀಜಿಯವರ ಜನ್ಮದಿನದ ಅಂಗವಾಗಿ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಮಂಗಳೂರು ವತಿಯಿಂದ ಜಿಲ್ಲಾದ್ಯಂತ ಸೆ.15 ರಿಂದ ಅ.2ರವರೆಗೆ ಸ್ವಚ್ಛತಾ ಅಭಿಯಾನವನ್ನು"ಸ್ವಚ್ಛತೆಯೇ ಸೇವೆ" ಎಂಬ ಧ್ಯೇಯ ವಾಕ್ಯದಡಿಯಲ್ಲಿ ಗ್ರಾಮ ಪಂಚಾಯತ್, ಧರ್ಮಸ್ಥಳ ಹಾಗೂ ತಾಲೂಕು ಪಂಚಾಯತ್, ಬೆಳ್ತಂಗಡಿಯ, ಸಹಯೋಗದೊಂದಿಗೆ ಸೆ.15 ಶುಕ್ರವಾರದಂದು ನೇತ್ರಾವತಿ ಸ್ನಾನಘಟ್ಟವನ್ನು ಸ್ವಚ್ಛಗೊಳಿಸುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು, ಉಜಿರೆಯ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಧ್ಯಾಹ್ನ 3 ಗಂಟೆಗೆ ಶುರುವಾದ ಸ್ವಚ್ಛತಾ ಅಭಿಯಾನದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದರು.


ಎನ್.ಎಸ್.ಎಸ್ ನ ಯೋಜನಾಧಿಕಾರಿ ಪ್ರೊ. ದೀಪಾ ಆರ್.ಪಿ, ಧರ್ಮಸ್ಥಳ ಗ್ರಾಮ ಪಂಚಾಯತ್‌ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಸ್ಥಳೀಯ ಗ್ರಾಮಸ್ಥರು, ಎನ್.ಎಸ್.ಎಸ್ ಸ್ವಯಂಸೇವಕರು ಪಾಲ್ಗೊಂಡಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top