ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ ಸಮಾರೋಪ

Upayuktha
0

ಧರ್ಮದ ಮರ್ಮವನ್ನರಿತು ಆಚರಣೆ ಮಾಡಿದರೆ ಜೀವನ ಪಾವನ


ಉಜಿರೆ: ಧರ್ಮದ ಮರ್ಮವನ್ನರಿತು ನಮ್ಮ ದೈನಂದಿನ ಜೀವನದಲ್ಲಿ ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ. ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿಯಿಂದ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಭಾನುವಾರ ಧರ್ಮಸ್ಥಳದಲ್ಲಿ 52ನೆ ವರ್ಷದ ಪುರಾಣ ವಾಚನ-ಪ್ರವಚನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.


ಪುರಾಣ ವಾಚನ- ಪ್ರವಚನ ಶ್ರವಣದಿಂದ ಭಗವಂತನ ದರ್ಶನವಾಗಿ ಆಧ್ಯಾತ್ಮಿಕ ಉನ್ನತಿಯನ್ನು ಹೊಂದಬಹುದು. ರಾಮಾಯಣ ಮತ್ತು ಮಹಾಭಾರತ ಅಲ್ಲದೆ ವಿವಿಧ ಪೌರಾಣಿಕ ಪ್ರಸಂಗಗಳನ್ನು ಆಯ್ಕೆ ಮಾಡಿ ಪುರಾಣ ವಾಚನ-ಪ್ರವಚನಕ್ಕೆ ವಿಶೇಷ ಆಕರ್ಷಕ ಆಯಾಮವನ್ನು ರೂಪಿಸುವಲ್ಲಿ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಪ್ರೇರಣೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು.


ಪುರಾಣ ವಾಚನ - ಪ್ರವಚನದಿಂದ ಸಮಯದ ಸದುಪಯೋಗವಾಗುವುದಲ್ಲದೆ, ಧರ್ಮಜಾಗೃತಿ ಯೊಂದಿಗೆ ಆರೋಗ್ಯಪೂರ್ಣ ಸಮಾಜ ರೂಪುಗೊಳ್ಳುತ್ತದೆ ಎಂದು ಹೆಗ್ಗಡೆಯವರು ಅಭಿಪ್ರಾಯ ಪಟ್ಟರು.


ಭಾನುವಾರ ಧರ್ಮಸ್ಥಳದ ಕುಮಾರಿ ಸುಪ್ರಿತಾ ವಾಚನ ಮಾಡಿದರು. ಉಜಿರೆ ಅಶೋಕ ಭಟ್ ಪ್ರವಚನ ಮಾಡಿದರು.


63 ದಿನಗಳಲ್ಲಿ ನಡೆದ ಪುರಾಣ ವಾಚನ- ಪ್ರವಚನದಲ್ಲಿ ಭಾಗವಹಿಸಿದ 13 ವಾಚನಕಾರರು ಮತ್ತು 18 ಮಂದಿ ಪ್ರವಚನಕಾರರನ್ನು ಹೆಗ್ಗಡೆಯವರು ಗೌರವಿಸಿ ಅಭಿನಂದಿಸಿದರು. ಹೇಮಾವತಿ ವೀ. ಹೆಗ್ಗಡೆಯವರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಕೊನೆಯಲ್ಲಿ ಧನ್ಯವಾದವಿತ್ತರು.


ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ದೇವಳದ ಪಾರುಪತ್ಯಗಾರ್ ಲಕ್ಷ್ಮೀನಾರಾಯಣ ರಾವ್ ಮತ್ತು ಸಂತೋಷ್ ಗೌಡ ಸಮಾರಂಭದ ಆಯೋಜನೆಯಲ್ಲಿ ಸಹಕರಿಸಿದರು.


ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ; ಮನವಿ ಪತ್ರ ಬಿಡುಗಡೆ ಸಮಾರಂಭ

ಉಜಿರೆ: ವೇಣೂರಿನಲ್ಲಿ 2024ರ ಫೆಬ್ರವರಿ 22 ರಿಂದ ಮಾರ್ಚ್ 1ರ ವರೆಗೆ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಮನವಿ ಪತ್ರ ಬಿಡುಗಡೆ ಸಮಾರಂಭವು ಇದೇ 24 ರಂದು ಭಾನುವಾರ ಸಂಜೆ 5 ಗಂಟೆಗೆ ವೇಣೂರಿನಲ್ಲಿ ಬಾಹುಬಲಿ ಸಭಾಭವನದಲ್ಲಿ ನಡೆಯಲಿದೆ ಎಂದು ಮಸ್ತಕಾಭಿಷೇಕ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ ಕುಮಾರ್ ಇಂದ್ರ ತಿಳಿಸಿದ್ದಾರೆ.


ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮನವಿ ಪತ್ರ ಬಿಡುಗಡೆಗೊಳಿಸುವರು. ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡುವರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಶುಭಾಶಂಸನೆ ಮಾಡುವರು.



Post a Comment

0 Comments
Post a Comment (0)
To Top