ಉಡುಪಿ: ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವು ಸೆಪ್ಟಂಬರ್ 24 ರಂದು ಬೆಳಗ್ಗೆ 11 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್.ಭೋಜೆಗೌಡ, ಡಾ.ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
'ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ