ಮಂಗಳೂರಿನಲ್ಲಿ ಸೆ.25ರಂದು ದಸರಾ ಕ್ರೀಡಾಕೂಟ

Upayuktha
0

 



ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.25ರ ಬೆಳಿಗ್ಗೆ 9 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.


ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸಲಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ. ನಾಗೇಂದ್ರ ಗೌರವ ಉಪಸ್ಥಿತಿ ವಹಿಸಲಿದ್ದು, ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. 


ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಭಾಗವಹಿಸಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top