ಸುರತ್ಕಲ್: ಗೋವಿಂದದಾಸ ಕಾಲೇಜು ಸುರತ್ಕಲ್‍ನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸಂವಿಧಾನ ಪೀಠಿಕೆ ಓದುವಿಕೆಯ ಮೂಲಕ ನಡೆಸಲಾಯಿತು. ಸಂವಿಧಾನ ಪೀಠಿಕೆಯ ಓದಿನಿಂದ ವಿದ್ಯಾರ್ಥಿಗಳು ಪ್ರಜಸತ್ತಾತ್ಮಕ ಮೌಲ್ಯಗಳನ್ನು ಹಾಗೂ ರಾಷ್ಟ್ರಭಕ್ತಿಯನ್ನು ಮೂಡಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರಾಂಶುಪಾಲ ಪ್ರೊ.ಪಿ.ಕೃಷ್ಣಮೂರ್ತಿ ನುಡಿದರು.
ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಕ್ಯಾಪ್ಟನ್. ಡಾ. ಸುಧಾಯು. ಸಂವಿಧಾನ ಪೀಠಿಕೆ ಓದಿ ಪ್ರತಿಜ್ಞಾವಿಧಿ ಬೋಧಿಸಿದರು. ಕಾಲೇಜಿನ ಉಪಪ್ರಾಚಾರ್ಯ ಪ್ರೊ.ರಮೇಶ್ ಭಟ್‍ಎಸ್.ಜಿ.,ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕ ಪ್ರೊ.ಪಿ. ಹರೀಶಆಚಾರ್ಯ, ಪ್ರಾಧ್ಯಾಪಕರಾದ ಪ್ರೊ. ವಾಮನ ಕಾಮತ್, ಡಾ.ಪ್ರಶಾಂತ್‍ಎಂ.ಡಿ.ಸ್ಟಾಫ್ ಅಸೋಸಿಯೇಶನ್‍ನ ಕಾರ್ಯದರ್ಶಿ ಗೀತಾ ಕೆ.ಉಪಸ್ಥಿತರಿದ್ದರು. ಪ್ರಾಧ್ಯಾಪಕ ವೃಂದ, ಆಡಳಿತಾತ್ಮಕ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ