ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರಿನ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ದ ಸಹಯೋಗದೊಂದಿಗೆ ತಲಪಾಡಿಯಲ್ಲಿ ನಡೆಸಿದ ಗಡಿನಾಡ ಉತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಗಡಿನಾಡ ಕನ್ನಡಿಗರ ಸಹಕಾರದಿಂದ ಯಶಸ್ವಿಯಾಗಿ ನಡೆದಿದೆ. ಮುಂದೆಯೂ ಕಾಸರಗೋಡು ಕನ್ನಡಿಗರ ಜೊತೆಗೆ ನಾವಿದ್ದೇವೆ ಎಂದು ದ.ಕ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ ಶ್ರೀನಾಥ ಹೇಳಿದರು.
ಅವರು ಶುಕ್ರವಾರ ತಲಪಾಡಿಯ ವಿಶ್ವಾಸ್ ಆಡಿಟೋರಿಯಂನಲ್ಲಿ ಗಡಿ ಉತ್ಸವದ ಯಶಸ್ಸಿಗೆ ಕಾರಣರಾದವರಿಗೆ ಕೃತಜ್ಞತೆ ಸಲ್ಲಿಸಿ ಲೆಕ್ಕಪತ್ರವನ್ನು ಮಂಡಿಸಿ ಮಾತನಾಡಿದರು.
ಸಭೆಯಲ್ಲಿ ಗಡಿ ಉತ್ಸವ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಸಂಯೋಜಕ ಜಿ.ವೀರೇಶ್ವರ ಕರ್ಮರ್ಕರ್, ಉಳ್ಳಾಲ ತಾಲೂಕು ಕಸಾಪ ಅಧ್ಯಕ್ಷ ಡಾ. ಧನಂಜಯ ಕುಂಬ್ಳೆ, ಕಲಾವಿದರಾದ ತೋನ್ಸೆ ಪುಷ್ಕಳ್ ಕುಮಾರ್, ಸನತ್ ಕುಮಾರ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ