ಕಾಪು ಕಾಲೇಜ್‌: ರೋವರ್ ರೇ೦ಜರ್ ಮೇಟ್ ಹಾಗೂ ವಿಪತ್ತು ನಿರ್ವಹಣಾ ತರಬೇತಿ ಶಿಬಿರ

Upayuktha
0

   


ಕಾಪು: ಸೆಪ್ಟೆಂಬರ್ 11 ರಿಂದ 13ರ ವರೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ಜಿಲ್ಲಾ ಮಟ್ಟದ ರೋವರ್ ರೇ೦ಜರ್ ಮೇಟ್ (ನಾಯಕತ್ವಶಿಬಿರ) ಹಾಗೂ ವಿಪತ್ತು ನಿರ್ವಹಣಾ ತರಬೇತಿ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗೋಪಾಲಕೃಷ್ಣಎಂ. ಗಾಂವ್ಕರ್ ಇವರು ನೆರವೇರಿಸಿದರು. ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಶಿಸ್ತು, ಸಹಬಾಳ್ವೆ, ಹಾಗೂ ನಾಯಕತ್ವ ಗುಣಗಳನ್ನು ತಮ್ಮ ಜೀವನದಲ್ಲಿ ಆಳವಡಿಸಲು ಇಂತಹ ಶಿಬಿರಗಳು ಅತ್ಯಗತ್ಯ ಎಂದು ಹೇಳಿದರು. 


ಸಮಾರಂಭದಲ್ಲಿ ಉಡುಪಿ  ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯದರ್ಶಿ ಬಿ. ಆನಂದ ಅಡಿಗ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಶ್ರೀಮತಿ ಸುಮನಾ ಶೇಖರ್, ರೇಂಜರ್ ಲೀಡರ್ ಶ್ರೀಮತಿ ಸವಿತಾ, ರೋವರ್‌  ಸ್ಕೌಟ್ಸ್‌ ಲೀಡರ್ ವಿತೇಶ್ ಕಾಂಚನ್ ಉಪಸ್ಥಿತರಿದ್ದರು. ಶಿಬಿರದಲ್ಲಿಉಡುಪಿ ಜಿಲ್ಲೆಯ ವಿವಿಧ ಕಾಲೇಜಿನ 70 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ, ಮ್ಯಾಪಿಂಗ್, ಧ್ವಜಗಳ ಮಾಹಿತಿ, ಗಂಟುಗಳು ಮತ್ತು ಲಾಸಿಂಗ್ ಬಗ್ಗೆಮಾಹಿತಿ ನೀಡಲಾಯಿತು. ಶಿಬಿರಾಗ್ನಿ ಹಾಗೂ ಇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

  

 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top