ಸೆ.24: ಹರಪ್ಪನಹಳ್ಳಿಯಲ್ಲಿ ನೂರು ಕೃತಿಗಳ ಲೋಕಾರ್ಪಣೆ, ರಾಜ್ಯ ಮಟ್ಟದ ಕವಿಗೋಷ್ಠಿ

Upayuktha
0

ಹರಪನಹಳ್ಳಿ: ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ), ಹೂವಿನಹಡಗಲಿ, ಕನ್ನಡ ಸಾಹಿತ್ಯ ಪರಿಷತ್ತು ಹರಪ್ಪನಹಳ್ಳಿ ತಾಲ್ಲೂಕು ಘಟಕ ಮತ್ತು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹರಪ್ಪನಹಳ್ಳಿ ತಾಲೂಕು ಘಟಕ ಇವರ ಸಂಯಕ್ತ ಆಶ್ರಯದಲ್ಲಿ ಹರಪ್ಪನಹಳ್ಳಿಯ ತೆಗ್ಗಿನ ಮಠದ ಚಂದ್ರಶೇಖರಸ್ವಾಮಿ ಸಭಾ ಭವನದಲ್ಲಿ ಸೆ.24ರಂದು ಭಾನುವಾರ ಬೆಳಗ್ಗೆ 11ಕ್ಕೆ ನೂರು ಕೃತಿಗಳ ಲೋಕಾರ್ಪಣೆ ಹಾಗೂ ರಾಜ್ಯ ಮಟ್ಟದ ಕವಿಗೋಷ್ಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಜ್ಯಾಧ್ಯಕ್ಷ ಮಧುನಾಯ್ಕ ಲಂಬಾಣಿ ತಿಳಿಸಿದ್ದಾರೆ.


ಈ ಕಾರ್ಯಕ್ರಮದಲ್ಲಿ ತೆಗ್ಗಿನ ಮಠದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ, ನಾಡೋಜ ಡಾ.ಮಹೇಶ ಜೋಶಿಯವರು ಕೃತಿಗಳನ್ನು ಲೋಕಾರ್ಪಣೆ ಮಾಡುವರು. ಜನಪ್ರಿಯ ಶಾಸಕರು ಶ್ರೀಮತಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ತು ಹರಪ್ಪನಹಳ್ಳಿ ತಾಲ್ಲೂಕು ಅಧ್ಯಕ್ಷ ಕೆ. ಉಜ್ಜೆಂಗಪ್ಪ ಅಧ್ಯಕ್ಷತೆ ವಹಿಸುವರು. 


ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 120 ಜನ ಬರಹಗಾರರು 150ಕ್ಕೂ ಹೆಚ್ಚು ಕೃತಿಗಳೊಂದಿಗೆ ಹಾಜರಾಗಲಿದ್ದು ರಾಜ್ಯ ಮಟ್ಟದ ಕವಿಗೋಷ್ಟಿಗೆ 40 ಜನ ಕವಿಗಳು ಭಾಗವಹಿಸುವರು. ಚಲನಚಿತ್ರ ಹಾಸ್ಯ ನಟ ಮೈಸೂರು ರಮಾನಂದ ಮುಖ್ಯ ಅತಿಥಿಗಳಾಗಿ ಇತರರು ಹಾಜರಾಗುವರು.


ರಾಜ್ಯ ಬರಹಗಾರರ ಸಂಘದ ಪ್ರಧಾನ ಕಾರ್ಯದರ್ಶಿ ವಿ.ಜಿ. ಅಗ್ರಹಾರ, ಕರ್ನಾಟಕ ರಾಜ್ಯ ಬರಹಗಾರರ ಸಂಘ ತಾಲೂಕು ಘಟಕದ ಅಧ್ಯಕ್ಷ ಕೆ.ಬಸವರಾಜ, ಕಾರ್ಯದರ್ಶಿ ಮಂಜುನಾಥ ಎಚ್.ಕೆ., ಸದಸ್ಯರಾದ ಕೊಟ್ರೇಶ. ಕೆ. ಶಾಂತಲಿಂಗಪ್ಪ.ಟಿ ಗಾಟಿನ ಮಂಜುನಾಥ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.


ಹಾಸನ ಜಿಲ್ಲಾ ಘಟಕದ ಅಧ್ಯಕ್ಷರು ಸಾಹಿತಿ ಗೊರೂರು ಅನಂತರಾಜು ಗಿನ್ನಿಸ್ ದಾಖಲೆಯ ಈ ವಿನೂತನ ಕಾರ್ಯಕ್ರಮದಲ್ಲಿ ಹಾಸನ ತಂಡದ 19 ಕೃತಿಕಾರರು 25 ಕೃತಿಗಳೊಂದಿಗ ಭಾಗವಹಿಸುತ್ತಿದ್ದು ಕಾರ್ಯಕ್ರಮ ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top