ಧರ್ಮಸ್ಥಳ: ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಡಿ.ಜಿ., ಐ.ಜಿ. ಸೇರಿದಂತೆ ಪೋಲಿಸ್ ಉನ್ನತ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಆದೇಶ ಹೊರಡಿಸಿದ ನ್ಯಾಯಾಲಯ ಸೌಜನ್ಯ ಪ್ರಕರಣಗಳಲ್ಲಿ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟು ಆದೇಶ ಉಲ್ಲಂಘಿಸದಂತೆ ಎಚ್ಚರಿಕೆ ನೀಡಿದೆ. ಹಾಗೂ ಇದಕ್ಕೆ ತಪ್ಪಿದಲ್ಲಿ ಡಿ.ಜಿ. ಮತ್ತು ಐ.ಜಿ., ಸರಕಾರದ ಮುಖ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಪೋಲಿಸ್ ಉನ್ನತ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ನ್ಯಾಯಾಲಯ ಆದೇಶ ಹೊರಡಿಸಿದೆ.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ಮತ್ತು ಹೆಗ್ಗಡೆ ಕುಟುಂಬಸ್ಥರ ಪರವಾಗಿ ಖ್ಯಾತ ಹಿರಿಯ ನ್ಯಾಯವಾದಿಗಳಾದ ಉದಯ ಹೊಳ್ಳ ಹಾಗೂ ರಾಜಶೇಖರ್ ಹಿಲ್ಯಾರು ವಾದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ