
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಭೌತಶಾಸ್ತ್ರ ವಿಭಾಗದ ವತಿಯಿಂದ ಸೆ. 21 ರಿಂದ 23ರ ವರೆಗೆ ಭೌತಶಾಸ್ತ್ರ ಮತ್ತು ನ್ಯಾನೋ ತಂತ್ರಜ್ಞಾನ ಕುರಿತ ಮೂರು ದಿನದ ಅಂತಾರಾಷ್ಟ್ರೀಯ ಸಮ್ಮೇಳನ (ICPN – 2023) ವನ್ನು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದೆ.
ಭಾರತೀಯ ತಂತ್ರಜ್ಞಾನ ಸಂಸ್ಥೆಯ(ಐಐಟಿ) ಮದ್ರಾಸ್‌ನ ಪ್ರೊ. ಎಂ.ಎಸ್ ರಾವ್ ರವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕಲಬುರ್ಗಿ ಕೇಂದ್ರಿಯ ವಿಶ್ವವಿದ್ಯಾನಿಲಯದ ಸಂದರ್ಶಕ ಪ್ರಾಧ್ಯಾಪಕರಾದ ಪ್ರೊ.ಎಂ. ವಿ ಎನ್ ಅಂಬಿಕಾಪ್ರಸಾದ್ ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಯರಾಜ್ ಅಮೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ರಾಜು ಕೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಸಂಗಪ್ಪ ವೈ, ಸಂಕಿರಣದ ಸಂಚಾಲಕ ಪ್ರೊ. ದೇವೇಂದ್ರಪ್ಪ. ಹೆಚ್ ಮತ್ತು ಕಾರ್ಯದರ್ಶಿ ಪ್ರೊ. ಗಣೇಶ ಸಂಜೀವ ಮೊದಲಾದವರು ಉಪಸ್ಥಿತರಿರಲಿದ್ದಾರೆ. ಸಮ್ಮೇಳನದಲ್ಲಿ ವಿವಿಧ ಸಂಸ್ಥೆಗಳ ಸುಮಾರು 230 ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಲ್ಲಿದ್ದು, ವಿವಿಧ ದೇಶಗಳ ಒಟ್ಟು 14 ಅಂತಾರಾಷ್ಟ್ರೀಯ & ರಾಷ್ಟ್ರೀಯ ವಿಷಯ ತಜ್ಞರು ಭೌತಶಾಸ್ತ್ರ & ನ್ಯಾನೋತಂತ್ರಜ್ಞಾನದ ಕ್ಷೇತ್ರಗಳ ಕುರಿತು ಆಹ್ವಾನಿತ ಉಪನ್ಯಾಸ ನೀಡಲಿದ್ದಾರೆ ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ