ಅಂತರ್ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನ ಪ.ಪೂ. ಕಾಲೇಜಿಗೆ ಹಲವು ಪ್ರಶಸ್ತಿ

Upayuktha
0


ಪುತ್ತೂರು: ಮಂಗಳೂರಿನ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜಿನ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.


ಶಾಸ್ತ್ರೀಯ ಸಂಗೀತದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ ಪ್ರಥಮ ಸ್ಥಾನ, ರಂಗೋಲಿ ಸ್ಪರ್ಧೆಯಲ್ಲಿ  ದ್ವಿತೀಯ ವಿಜ್ಞಾನ ವಿಭಾಗದ ಕಿರಣ್ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ವಿ. ಶರಣ್ಯ ಪ್ರಥಮ ಸ್ಥಾನ ಹಾಗೂ ಏಕವ್ಯಕ್ತಿ ಯಕ್ಷಗಾನದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಶಾಂಭವಿ ಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.


ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.  ಪ್ರದರ್ಶನ ಕಲಾ ಸಂಘದ ನಿರ್ದೇಶಕರಾದ ಸುಮನಾ ಕೆ, ರಶ್ಮಿ ಪಿ.ಎಸ್ ಹಾಗೂ ಭರತ್ ಜಿ.ಪೈ  ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 


Post a Comment

0 Comments
Post a Comment (0)
To Top