ಉಡುಪಿ ಜಿಲ್ಲೆಯಲ್ಲಿ ಸೆ. 26 ರಿಂದ ಅ. 25 ರ ವರೆಗೆ ಕಾಲುಬಾಯಿ ಲಸಿಕಾ ಕಾರ್ಯಕ್ರಮ

Upayuktha
0

ಉಡುಪಿ: ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 4 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಸೆಪ್ಟಂಬರ್ 26 ರಿಂದ ಅಕ್ಟೋಬರ್ 25 ರ ವರೆಗೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. 


ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾಲುಬಾಯಿ ರೋಗದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.     


ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕಟ್ಟೆಚ್ಚರ ವಹಿಸಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈ ಅವಧಿಯಲ್ಲಿ ಯಾವುದಾದರೂ ಜಾನುವಾರುಗಳಿಗೆ ಲಸಿಕೆ ನೀಡದೆ ಬಿಟ್ಟುಹೋದಲ್ಲಿ ಅಂತಹ ಜಾನುವಾರು ಮಾಲೀಕರು ಸಮೀಪದ ಪಶುವೈದ್ಯರನ್ನು ಸಂಪರ್ಕಿಸಿ ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ತಿಳಿಸಿದರು.  


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಪಶು ಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಂಕರ್ ಶೆಟ್ಟಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

'ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top