ಧರ್ಮತ್ತಡ್ಕ ಪ್ರೌಢ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Upayuktha
0


ಧರ್ಮತ್ತಡ್ಕ: ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ಪ್ರೌಢಾಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟವು ಇಂದು ಆರಂಭಗೊಂಡಿತು. ವಿದ್ಯಾರ್ಥಿಗಳ ಶಿಸ್ತಿನ ಪಥಸಂಚಲನದೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಕ್ರೀಡಾಕೂಟದ ಔಪಚಾರಿಕ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ವಹಿಸಿದರು.


ಧರ್ಮತ್ತಡ್ಕದ ಆಯರ್ವೇದ ಕೇಂದ್ರದ ವೈದ್ಯೆ ಡಾ.ಸೀತಾರತ್ನ ಕ್ರೀಡಾಜ್ಯೋತಿಯನ್ನು ಬೆಳಗಿ ಚಾಲನೆಯನ್ನಿತ್ತರು. ಎ.ಯು.ಪಿ.ಶಾಲೆ ಧರ್ಮತ್ತಡ್ಕದ ಮುಖ್ಯ ಶಿಕ್ಷಕ ಮಹಾಲಿಂಗ ಭಟ್ ಪಥ ಸಂಚಲನದ ಗೌರವವನ್ನು ಸ್ವೀಕರಿಸಿದರು. ಶಾಲಾ ಮೇನೇಜರ್ ಶಂಕರನಾರಾಯಣ ಭಟ್ ಶುಭಾಶಯಗಳನ್ನು ತಿಳಿಸಿದರು‌. ಪ್ರಭಾರ ಮುಖ್ಯ ಶಿಕ್ಷಕ ಶಶಿಕುಮಾರ್ ಪಿ. ಪ್ರಾಸ್ತಾವಿಕ ನುಡಿಗಳನ್ನಾಡಿದರು.


ಶಾಲಾ ನಾಯಕ ರುಚಿತ್ ಕ್ರೀಡಾಳುಗಳಿಗೆ ಪ್ರತಿಜ್ಞೆಯ‌ನ್ನು ಬೋಧಿಸಿದನು. ಸ್ಟಾಫ್ ಸೆಕ್ರೆಟರಿ ರಾಮಕೃಷ್ಣ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು. ದೈಹಿಕ ಶಿಕ್ಷಣ ಅಧ್ಯಾಪಕ (PET) ಸಂತೋಷ್ ಕುಮಾರ್ ನೇತೃತ್ವ ನೀಡಿದರು. ವಿದ್ಯಾರ್ಥಿನಿಯರು ಪ್ರಾರ್ಥನೆಯ‌ನ್ನು ಹಾಡಿದರು‌. ಸೂರ್ಯನಾರಾಯಣ ಭಟ್ ಸ್ವಾಗತಿಸಿ ಶಶಿಧರ ಕೆ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top