ಸಂಘ ಸಂಸ್ಥೆಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರಿಂದ ಕ್ರೀಡಾ ಸಲಕರಣೆ ವಿತರಣೆ

Upayuktha
0


ಸುರತ್ಕಲ್: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯ 2022-23ನೇ ಸಾಲಿನ ಜಿಲ್ಲಾ ಪಂಚಾಯತ್ ವತಿಯಿಂದ ಭಾರತ ಸರ್ಕಾರ ಪೂರೈಸಿದ ಕ್ರೀಡಾ ಸಾಮಗ್ರಿ ಮತ್ತು ಸಲಕರಣೆಗಳನ್ನು  ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಇಂದು (ಸೆ.13) ಸುರತ್ಕಲ್‌ನಲ್ಲಿ ವಿತರಿಸಿದರು.


ಈ ಸಂದರ್ಭ ಮಾತನಾಡಿದ ಅವರು ಯುವ ಕ್ರೀಡಾಳುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸರಕಾರ ಸಲಕರಣೆ ವಿತರಿಸುತ್ತಿದೆ. ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಜಿಲ್ಲೆಯ ಯುವ ಜನತೆ ಬೆಳೆದು ಬರಬೇಕಿದೆ. ಈಗಾಗಲೇ ಕಬಡ್ಡಿ, ಖೋ ಖೋ, ಓಟ ಮತ್ತಿತರ ಸ್ಪರ್ಧೆಯಲ್ಲಿ ದೇಶ ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಜಿಲ್ಲೆಯ ಕ್ರೀಡಾಳುಗಳು ಹೆಸರು ಮಾಡಿದ್ದಾರೆ ಎಂದು ಶ್ಲಾಘಿಸಿದರು.


ವಿವಿಧ ಕ್ರೀಡೆಗೆ ಸಂಬಂಧಿಸಿದಂತೆ ವಾಲಿಬಾಲ್‌ ಮೌಲ್ಡಡ್, ಥ್ರೋ ಬಾಲ್, ವಾಲಿಬಾಲ್ ನೆಟ್, ಥ್ರೋಬಾಲ್ ನೆಟ್, ಕಿಟ್ ಬ್ಯಾಗ್, ಚೆಸ್ ಸೆಟ್, ಟೆನ್ನಿಕಾಯ್ಟ್ ರಿಂಗ್, ಕ್ರಿಕೆಟ್ ಸೆಟ್, ಶಾಟ್ ಪುಟ್, ಯೋಗ ಮ್ಯಾಟ್ ಮತ್ತಿತರ ಸಾಮಗ್ರಿಗಳನ್ನು ಉತ್ತರ ಕ್ಷೇತ್ರ ವ್ಯಾಪ್ತಿಯ ಐದು ಅರ್ಹ ಸಂಘ ಸಂಸ್ಥೆಗಳಿಗೆ ವಿತರಿಸಲಾಯಿತು. ಈ ಸಂದರ್ಭ ಮನಪಾ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top