ಉಡುಪಿ: ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಮಹೇಶ್ ಠಾಕೂರ್ ಅವರು ಪ್ರತಿಷ್ಟಿತ ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
2003ರಲ್ಲಿ ಉಡುಪಿಯಲ್ಲಿ ನಡೆದ ಮೂರು ಜಿಲ್ಲೆಗಳ ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿಯಾಗಿ, 2011ರಲ್ಲಿ ನಡೆದ ಕರ್ನಾಟಕ ರಾಜ್ಯ ಹಿರಿಯರ ಕ್ರೀಡಾಕೂಟದ ಸಂಘಟನಾ ಸಮಿತಿಯ ಕಾರ್ಯದರ್ಶಿಯಾಗಿ ಮತ್ತು 2019 ಆಗಸ್ಟ್ ನಲ್ಲಿ ಕರ್ನಾಟಕ ರಾಜ್ಯ ಕಿರಿಯರ ಕೂಟ , 2019 ಸಪ್ಟೆಂಬರ್ ನಲ್ಲಿ ಅಖಿಲ ಭಾರತ ದಕ್ಷಿಣ ವಲಯ ಕ್ರೀಡಾಕೂಟ ಮತ್ತು 2021 ಸೆಪ್ಟೆಂಬರ್ ನಲ್ಲಿ 23ರ ವಯೋಮಿತಿಯ ಮತ್ತು ಪುರುಷ ಮತ್ತು ಮಹಿಳೆಯರ ವಿಭಾಗದ ಕ್ರೀಡಾಕೂಟ, 2022 ಮೇಯಲ್ಲಿ 20ರ ವಯೋಮಿತಿಯ ಮತ್ತು 23 ವಯೋಮಿತಿಯ ಅಥ್ಲೆಟಿಕ್ ಚಾಂಪಿಯನ್ಶಿಪ್ ವನ್ನು ಯಶಸ್ವಿಯಾಗಿ ನಿರ್ವಹಿಸಿರುತ್ತಾರೆ.
ಆಯ್ಕೆಯಾದ ಬಳಿಕ ರಾಜ್ಯ ಗೃಹ ಸಚಿವರು ಹಾಗೂ ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಜಿ ಪರಮೇಶ್ವರ್ ರವರು ಮಹೇಶ್ ಠಾಕೂರ್ ಅವರನ್ನು ಅಭಿನಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ