ಭೂ ಮಾಲಕರ ಸಮಸ್ಯೆ ಪರಿಹಾರಕ್ಕೆ ಯತ್ನ : ಡಿಸಿ ಮುಲ್ಲೈ ಮುಗಿಲನ್

Upayuktha
0

 


ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರ ಮಾರ್ಗದ ಸಾಣೂರು - ಬಿಕರ್ನಕಟ್ಟೆ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದ ಭೂ ಮಾಲೀಕರ ಪರಿಹಾರಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಪ್ರಯತ್ನಿಸಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಭರವಸೆ ನೀಡಿದರು.


 ಅವರು ಆ.31ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಭೂ ಮಾಲೀಕರ ಹೋರಾಟ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಭೂ ಮಾಲೀಕರಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ ಅವರು, ಹೆದ್ದಾರಿಗಳು ಅಭಿವೃದ್ಧಿ ಸೂಚ್ಯಂಕದ ಮಾಪನವಾಗಿದ್ದು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರದ ಆರ್ಥಿಕ ಚಟುವಟಿಕೆಗಳ ಏಳಿಗೆಗೆ ಪೂರಕವಾಗಿರುತ್ತದೆ. ಈ ದಿಸೆಯಲ್ಲಿ ಹೆದ್ದಾರಿ ನಿರ್ಮಾಣಕ್ಕೆ ಭೂಮಿ ಒದಗಿಸಿದ ಭೂ ಮಾಲೀಕರ ಸಮಸ್ಯೆಗಳನ್ನು ಬಗೆ ಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದವರು ಹೇಳಿದರು.


ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಅಜ್ಮಿ, ವಿಶೇಷ ಭೂಸ್ವಾದೀನಾಧಿಕಾರಿ ಮಹಮದ್ ಇಸಾಕ್, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ, ಸಂಬಂಧಿಸಿದ ಅಧಿಕಾರಿಗಳು, ಭೂ ಮಾಲೀಕರ ಹೋರಾಟ ಸಮಿತಿಯ ಅಧ್ಯಕ್ಷರಾದ ಮರಿಯಮ್ಮ ಥಾಮಸ್,  ಸಂಚಾಲಕರಾದ ಪ್ರಕಾಶ್, ಪದಾಧಿಕಾರಿಗಳಾದ ರತ್ನಾಕರ, ಜಯರಾಮ್ ಪೂಜಾರಿ, ವಿಶ್ವಜಿತ್ ಸೇರಿದಂತೆ ಸಮಿತಿಯ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top