ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್

Upayuktha
0

ಸಂಸದ ನಳಿನ್ ಕುಮಾರ್ ಕಟೀಲ್‌ಗೆ ರೈಲ್ವೆ ಸಚಿವರ ಭರವಸೆ




ಮಂಗಳೂರು: ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಇಂದು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸಚಿವರು, ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ನೀಡುವುದಾಗಿ ಭರವಸೆ ನೀಡಿದ್ದಾರೆ.


ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್ ವರೆಗೆ ವಿಸ್ತರಿಸುವಂತೆ ಇರುವ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಮಾನ್ಯ ಸಚಿವರನ್ನು ಒತ್ತಾಯಿಸಿದ್ದು, ಇದಕ್ಕೆ ಸ್ಪಂದಿಸಿರುವ ಸಚಿವರು ಅಂತಹ ಯಾವುದೇ ಪ್ರಸ್ತಾವನೆಗೆ ಒಪ್ಪಿಗೆ ನೀಡುವುದಿಲ್ಲವೆಂದು ತಿಳಿಸಿದ್ದಾರೆ.


ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ್ಯ ರಸ್ತೆಗೆ ಪ್ಯಾಸೆಂಜರ್ ರೈಲು ಒದಗಿಸಲು ಒಪ್ಪಿಗೆ ನೀಡಿದ್ದಾರೆ.


ರೈಲ್ವೆ ಇಲಾಖೆಯನ್ನು ಕೇರಳ ಹಿಡಿತದಿಂದ ತಪ್ಪಿಸಲು ದಕ್ಷಿಣ ರೈಲ್ವೆಯ ಪಾಲಕ್ಕಾಡು ವಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾಗವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಮನವಿಗೆ ಮಾನ್ಯ ಸಚಿವರು ಈಗಾಗಲೇ ಈ ಕುರಿತು ಅಗತ್ಯವಾದ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.


ದಕ್ಷಿಣ ರೈಲ್ವೆ ಹಾಗೂ ಕೊಂಕಣ ರೈಲ್ವೆಗಳ ವಿಭಾಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯ ವಿಳಂಬವನ್ನು ನಿವಾರಣೆಯ ಬಗ್ಗೆ ಸಂಸದರು ಸಚಿವರ ಗಮನ ಸೆಳೆದಾಗ ಈ ಕುರಿತು ಅನಗತ್ಯ ವಿಳಂಬವನ್ನು ನಿವಾರಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top