ಮಂಗಳೂರು: ನಗರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಕ್ಕಳಿಗೆ ಇಂದ್ರಧನುಷ್ ಅಭಿಯಾನದಡಿ ಲಸಿಕೆ ನೀಡಬೇಕೆಂದು ಮಹಾನಗರಪಾಲಿಕೆ ಆಯುಕ್ತರಾದ ಆನಂದ್ ಸಿ.ಎಲ್ ತಿಳಿಸಿದರು.
ಅವರು ಸೆ.5ರ ಮಂಗಳವಾರ ಮಹಾನಗರಪಾಲಿಕೆಯ ಸಭಾಂಗಣದಲ್ಲಿ ನಡೆದ ಪರಿಣಾಮಕಾರಿ ಮಿಷನ್ ಇಂದ್ರ ಧನುಷ್ 5.0 ಸಭೆಯಲ್ಲಿ ಮಾತನಾಡಿದರು.
ಲಸಿಕೆ ಪಡೆಯದೇ ಇರುವ ಮಕ್ಕಳಿಗೆ ರೋಗನಿರೋಧಕ ಲಸಿಕೆಗಳನ್ನು ನೀಡುವ ಉದ್ದೇಶದಿಂದ ಮಿಷನ್ ಇಂದ್ರಧನುಷ್ ಕಾರ್ಯಕ್ರಮದಡಿ ಸರ್ಕಾರ ಮಕ್ಕಳಿಗೆ ಲಸಿಕೆ ನೀಡುತ್ತಿದೆ. ಇದು ಪ್ರತಿಯೊಬ್ಬರಿಗೂ ನೀಡಬೇಕು ಎಂದರು. ನಗರ ವ್ಯಾಪ್ತಿಯಲ್ಲಿ ಬರುವ ಕಟ್ಟಡ ಕಾರ್ಮಿಕರು, ಅಪಾರ್ಟ್‍ಮೆರ್ಂಟ್ ನಿವಾಸಿಗಳಿಗೆ ಈ ಬಗ್ಗೆ ಅರಿವು ಮೂಡಿಸಿ ಅಲ್ಲಿನ ಮಕ್ಕಳಿಗೆ ಲಸಿಕೆ ನೀಡಬೇಕು ಎಂದರು.
ಇಂದ್ರಧನುಷ್ ಲಸಿಕೆ ನೀಡುವ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು. ಕಾರ್ಮಿಕ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಇತರೆ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಸಭೆಯಲ್ಲಿ ಆರೋಗ್ಯ ಇಲಾಖೆಯ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ರಾಜೇಶ್ ಬಿ.ವಿ., ಡಬ್ಲ್ಯೂ.ಎಚ್.ಓ ಸರ್ವೇಕ್ಷಣಾಧಿಕಾರಿ ಡಾ. ಅನಂತೇಶ್ ಬಾರ್ಕೊರು, ಮಂಗಳೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಜಯ್ ಕುಮಾರ್, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಹಾಗೂ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ