ಮಂಗಳೂರು: ಗಾಂಧೀನಗರದ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಇತ್ತೀಚೆಗೆ ಮಹಾನ್ ಮಾನವತಾವಾದಿ ನಾರಾಯಣ ಗುರುಗಳ 169ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಯರಾಜ್ ಅಮೀನ್, ಬ್ರಹ್ಮಶ್ರೀ ನಾರಾಯಣ ಗುರುಗಳು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಶ್ರೇಷ್ಠ ತತ್ವವನ್ನು ಸಮಾಜಕ್ಕೆ ನೀಡಿದವರು. ವಿದ್ಯೆಯಿಂದ ಎಲ್ಲರೂ ಸ್ವಾತಂತ್ರರಾಗುವ ಮೂಲಕ ತಮ್ಮ ಗುರಿಗಳನ್ನು ಸಾಧಿಸಬೇಕು, ಎಂದರು.
ಅಧ್ಯಕ್ಷತೆಯನ್ನು ಶ್ರೀ ಗೋಕರ್ಣನಾಥೇಶ್ವರ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ವಸಂತ್ ಕಾರಂದೂರು ವಹಿಸಿದ್ದರು. ಗೌರವಾನ್ವಿತ ಅತಿಥಿಗಳಾಗಿ ಬಿಂಬ ಮನೋಜ್ ಹಾಗೂ ಡಾ. ಬಿ. ಜಿ. ಸುವರ್ಣ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲೆ ಡಾ. ಆಶಾಲತಾ ಎಸ್. ಸುವರ್ಣ, ಎಂ. ಕಾಂ.ವಿಭಾಗದ ಪ್ರಾಂಶುಪಾಲೆ ಸುಜಾತ ಹಾಗೂ ಬಿ. ಎಡ್ ವಿಭಾಗದ ಪ್ರಾಂಶುಪಾಲೆ ಡಾ. ಧನಲಕ್ಷ್ಮಿ ಉಪಸ್ಥಿತರಿದ್ದರು.
ವಸಂತ್ ಕಾರಂದೂರು ಸ್ವಾಗತಿಸಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಘುರಾಜ್ ಕದ್ರಿ ವಂದಿಸಿದರು. ತೃತೀಯ ಬಿ.ಕಾಂ.ನ ಕುಮಾರಿ ಅಕ್ಷಿತಾ ನಿರೂಪಿಸಿದರು. ದಿನಾಚರಣೆಯ ಪ್ರಯುಕ್ತ ಅಂತರ್ ಪ್ರೌಢಶಾಲೆ ಹಾಗೂ ಕಾಲೇಜು ಮಟ್ಟದ ಭಾಷಣ ಸ್ಪರ್ಧೆ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ನಡೆಸಿದೆ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಬಳಿಕ ನಾರಾಯಣಗುರುಗಳ ಭಾವಚಿತ್ರದೊಂದಿಗೆ ಕಾಲೇಜಿನಿಂದ ಕುದ್ರೋಳಿ ದೇವಸ್ಥಾನಕ್ಕೆ ವೈಭವದ ಶೋಭಾಯಾತ್ರೆ ನಡೆಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ