ಮಂಗಳೂರು: ಇತ್ತೀಚೆಗೆ ಅಗಲಿದ ಸಾಮಾಜಿಕ ಕಾರ್ಯಕರ್ತ ಹಾಗೂ ಸಮಾಜದ ಮುಂದಾಳು ವಾಸುದೇವ ಬೋಳೂರು ಅವರಿಗೆ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಹಿಂದುಳಿದ ವರ್ಗದವರ ಶ್ರೇಯೋಭಿವೃದ್ಧಿಗೆ ಮತ್ತು ಅವರ ಧಾರ್ಮಿಕ ಶೈಕ್ಷಣಿಕ ಉನ್ನತಿಗೆ ವಾಸುದೇವ ಬೋಳೂರರ ಕೊಡುಗೆ ಅಪಾರ. ಮಠದ ಬೆಳವಣಿಗೆಯಲ್ಲೂ ಉತ್ತಮ ಕೆಲಸ ಮಾಡಿದ್ದಾರೆ ಎಂದು ನಿವೃತ್ತ ಸ್ಕೌಟ್ಸ್ ಮತ್ತು ಗೈಡ್ಸ್ ಅಧಿಕಾರಿ ಎಂ. ಜಿ. ಮೋಹನ್ ಹೇಳಿದರು.
ಅಮೃತಾನಂದಮಯಿ ಸೇವಾ ಸಮಿತಿ ಅಧ್ಯಕ್ಷ ಡಾ. ವಸಂತಕುಮಾರ ಪೆರ್ಲ, ಉಪಾಧ್ಯಕ್ಷ ಸುರೇಶ್ ಅಮೀನ್, ರವಿ ಉಚ್ಚಿಲ ಮೊದಲಾದವರು ಬೋಳೂರರ ವಿಶಿಷ್ಟ ಕೊಡುಗೆಗಳ ಬಗ್ಗೆ ಮಾತಾಡಿದರು.
ಅಮಲಭಾರತ ಯೋಜನೆಯ ಮಾಧವ ಸುವರ್ಣ, ಸೇವಾ ಸಮಿತಿ ಕಾರ್ಯದರ್ಶಿ ಅಶೋಕ್ ಶೆಣೈ, ಕ್ಯಾಂಪಸ್ ಡೈರೆಕ್ಟರ್ ಯತೀಶ್ ಬೈಕಂಪಾಡಿ, ಸದಸ್ಯ ನಿರಂಜನ ಅಡ್ಯಂತಾಯ ಮೊದಲಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ