ಮಂಗಳೂರು: ಶೈಕ್ಷಣಿಕ ವರ್ಷ 2023-24 ನೇ ಸಾಲಿನ ಸ್ನಾತಕ ಕಾರ್ಯಕ್ರಮಗಳಿಗೆ ಅಕ್ಟೋಬರ್ 3, 2023 ರಂದು ಒಂದು ದಿನದ ಮಟ್ಟಿಗೆ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಮಾಡಿಕೊಳ್ಳಲು ಕೊನೆಯ ಅವಕಾಶ ಕಲ್ಪಿಸಲಾಗಿದ್ದು, ತದನಂತರ ಬಂದ ಕೋರಿಕೆಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲು ಸಾಧ್ಯವಿಲ್ಲ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರ ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರುಗಳಿಗೂ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ತಡವಾಗಿ ದಾಖಲಾದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಿ ಹಾಜರಾತಿ ಪೂರೈಸಲು ಸೂಚಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


