ಚಂದನಾ ಕೆ.ಎಸ್ ಇವರಿಗೆ ಡಾಕ್ಟರೇಟ್ ಪದವಿ

Upayuktha
0


ಮುಡಿಪು: ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ. ಕೆ. ಅಭಯ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ 'ವೈದೇಹಿಯವರ ಸಾಹಿತ್ಯದಲ್ಲಿ ಪ್ರಾದೇಶಿಕ ಸಂಸ್ಕೃತಿ ಮತ್ತು ಸಾಮಾಜಿಕ ಚಿಂತನೆಯ ಪ್ರತಿನಿಧಿಕರಣ' ಎಂಬ ಪ್ರೌಢ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಚಂದನಾ ಕೆ.ಎಸ್. ಅವರಿಗೆ ಡಾಕ್ಟರೇಟ್ ಪದವಿಯನ್ನು ನೀಡಿದೆ.


ಪಾರ್ಶ್ವಿಕ ಅಂಧತ್ವ ಹೊಂದಿದ್ದರೂ ಪದವಿಯಲ್ಲಿ ಹತ್ತನೇ ರ್‍ಯಾಂಕ್, ಕನ್ನಡ ಎಂ.ಎ. ಯಲ್ಲಿ ಮಂಗಳೂರು ವಿ. ವಿ.ಗೆ ಮೊದಲ ರ್‍ಯಾಂಕ್ ನೊಂದಿಗೆ ಐದು ನಗದು ಬಹುಮಾನಗಳನ್ನು ಗಳಿಸಿದ ಇವರು ಮೊದಲ ಪ್ರಯತ್ನದಲ್ಲೇ K-SET, NET-JRF ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ.


ಗಮಕಿ ಕೋಟ ಶ್ರೀಕೃಷ್ಣ ಆಹಿತಾನಲ ಮತ್ತು ಸೌದಾಮಿನೀ ದಂಪತಿಯ ಮಗಳಾದ ಇವರು ಪ್ರಸ್ತುತ ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top