ಮಾತೃಭಾಷೆಯೊಂದಿಗೆ ಹಿಂದಿ ಕಲಿಕೆಯಿಂದ ಹೆಚ್ಚಿನ ಅನುಕೂಲ: ಡಾ. ಅನಸೂಯ ರೈ

Upayuktha
1 minute read
0


ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಗುರುವಾರ ಹಿಂದಿ ವಿಭಾಗ, ಆಂತರಿಕ ಗುಣಮಟ್ಟ ಖಾತರಿಕೋಶ (ಐಕ್ಯೂಎಸಿ) ಮತ್ತು ಕಾಲೇಜಿನ ಗ್ರಂಥಾಲಯದ ವತಿಯಿಂದ ಹಿಂದಿ ದಿನಾಚರಣೆಯ ಅಂಗವಾಗಿ 'ಗ್ರಂಥಾವಲೋಕನʼ- ಪುಸ್ತಕ ಪ್ರದರ್ಶನ ಮತ್ತು ಪುಸ್ತಕ ವಿಮರ್ಶೆ ಕಾರ್ಯಕ್ರಮ ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲೆ ಡಾ. ಅನಸೂಯ ರೈ, ಹಿಂದಿ ಭಾಷೆಗೆ ದೇಶದಲ್ಲಿ ಅತ್ಯುನ್ನತ ಸ್ಥಾನವಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲೂ ಹಿಂದಿ ಭಾಷಿಗರ ಸಂಖ್ಯೆ ದೊಡ್ಡದಿದೆ. ಹಾಗಾಗಿ ಮಾತೃಭಾಷೆಯ ಜೊತೆಗೆ ಹಿಂದಿ ಭಾಷೆಯ ಅಧ್ಯಯನ ಮಾಡಿದರೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಿದೆ, ಎಂದು ಹೇಳಿದರು.


ಐ.ಕ್ಯೂ.ಎ.ಸಿ ಸಂಯೋಜಕ ಡಾ. ಸಿದ್ದರಾಜು ಎಂ. ಎನ್. ಮಾತನಾಡಿ, ದೇಶದ ಇತಿಹಾಸ, ವಿಶೇಷವಾಗಿ ಭಾರತದ ಸ್ವಾತಂತ್ರ್ಯಪೂರ್ವ ಇತಿಹಾಸದ ಬಗ್ಗೆ ಹೆಚ್ಚಿನ ಮಾಹಿತಿ ಹಿಂದಿ ಭಾಷೆಯಲ್ಲಿ ದಾಖಲಾಗಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಿಂದಿ ಭಾಷೆಯನ್ನು ಅಧ್ಯಯನ ಮಾಡಬೇಕು ಎಂದರು.


ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಸುಮಾ ಟಿ. ಆರ್. ಪ್ರಸ್ತಾವಿಕವಾಗಿ ಮಾತನಾಡಿದರು. ಗ್ರಂಥಪಾಲಕಿ ಡಾ. ವನಜ ಸ್ವಾಗತಿಸಿ, ಗ್ರಂಥಾಲಯದ ಸಹಾಯಕಿ ಅಶ್ವಿನಿ ವಂದಿಸಿದರು. ವಿದ್ಯಾರ್ಥಿನಿ ಅಸ್ತುತಿ ಕಾರ್ಯಕ್ರಮ ನಿರೂಪಿಸಿದರು. ಪ್ರಥಮ ಬಿ.ಎಸ್ಸಿ ವಿದ್ಯಾರ್ಥಿನಿ ಖುಷಿ ಬಿ. ಸನಿಲ್‌ ಪುಸ್ತಕ ವಿಮರ್ಶೆ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

'ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top