ಮಂಗಳೂರು: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಇವರ ಸಹಯೋಗದಲ್ಲಿ ಸೆ.17 ರಂದು ಶ್ರೀ ವಿಶ್ವಕರ್ಮ ಜಯಂತಿ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಘನ ಉಪಸ್ಥಿತಿ ವಹಿಸುವರು.
ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಗಡೆ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಭಾಗೀರಥಿ ಮುರುಳ್ಯ, ಅಶೋಕ್ ಕುಮಾರ್ ರೈ, ಉಮಾನಾಥ ಎ. ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ, ಪ್ರತಾಪ ಸಿಂಹ ನಾಯಕ್, ಕೆ. ಮಂಜುನಾಥ ಭಂಡಾರಿ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಅವರು ಭಾಗವಹಿಸುವರು.
ಪೂರ್ಣಪ್ರಜ್ಞಾ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕರಾದ ಜಿ. ಯಶವಂತ ಆಚಾರ್ಯ ಶ್ರೀ ವಿಶ್ವಕರ್ಮ ಜಯಂತಿ ಸಂದೇಶವನ್ನು ನೀಡುವರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ