ಮೂಡುಬಿದಿರೆ: ವಿಶ್ವಮಾನ್ಯತೆಯನ್ನು ಪಡೆದಿರುವ ತುಳುವರು ತಮ್ಮ ಮಾತೃಭಾಷೆಯ ಬಗ್ಗೆ ಅಭಿಮಾನ ಶೂನ್ಯರಾಗಿರುವುದರಿಂದಲೇ ತುಳು ಭಾಷೆ ನಿರೀಕ್ಷಿತ ಮಟ್ಟದಲ್ಲಿ ಬೆಳೆದು ನಿಲ್ಲಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ತುಳುವರಾದ ನಾವೆಲ್ಲರೂ ನಮ್ಮ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದರ ಜೊತೆಗೆ ಮಕ್ಕಳಲ್ಲಿಯೂ ತುಳುವಿನ ಪ್ರೀತಿಯನ್ನು ಬೆಳೆಸಬೇಕಾಗಿದೆ ಎಂಬುದಾಗಿ ಮೂಡುಬಿದಿರೆ ತುಳುಕೂಟದ ಅಧ್ಯಕ್ಷರಾದ ಧನಕೀರ್ತಿ ಬಲಿಪ ಅವರು ಇಲ್ಲಿ ಮಾತನಾಡುತ್ತಾ ಅಭಿಪ್ರಾಯಪಟ್ಟರು.
ಮೂಡುಬಿದಿರೆಯ ಸ್ಕೌಟ್ಸ್‍ಗೈಡ್ಸ್ ಕನ್ನಡ ಭವನದಲ್ಲಿರುವ ತುಳುಕೂಟದ ಕಛೇರಿಯಲ್ಲಿ ಸೆ. 2 ರಂದು ನಡೆದ ಕೂಟದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಕೂಟದ ಗೌರವಾಧ್ಯಕ್ಷರಾದ ನ್ಯಾಯವಾದಿ ಬಾಹುಬಲಿ ಪ್ರಸಾದ್ ಅವರು ಕೂಡಾ ಮಾತನಾಡುತ್ತಾ ತುಳುಕೂಟದ ಕಾರ್ಯವನ್ನು ಶ್ಲಾಘಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ತುಳುಭಾಷಾಭಿಮಾನವನ್ನು ಬೆಳೆಸುವಲ್ಲಿ ತುಳುಕೂಟ ಶ್ರಮಿಸುವಂತೆ ಸಲಹೆ ನೀಡಿದರು.
ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಶೆಟ್ಟಿ ಕೆ. ಅವರು ವರದಿ ವಾಚಿಸಿದರು. ಸುಭಾಶ್ಚಂದ್ರ ಚೌಟ ಮತ್ತು ಜಿನೇಂದ್ರ ಜೈನ್ ಅವರು ಪರಿಶೋಧಿತ ಲೆಕ್ಕಪತ್ರಗಳನ್ನು ಮಂಡಿಸಿದರು. ಮುಂದಿನ ಮೂರು ವರ್ಷಗಳ ಅವಧಿಗೆ ಹೊಸ ಪರಾಧಿಕಾರಿಗಳ ಆಯ್ಕೆ ನೆರವೇರಿತು.
ಇತ್ತೀಚೆಗೆ ಕೂಟಕ್ಕೆ ಸೇರ್ಪಡೆಗೊಂಡ ಹೊಸ ಸದಸ್ಯರನ್ನು ಪುಷ್ಪ ನೀಡಿ ಸ್ವಾಗತಿಸಲಾಯಿತು. ಇದೇ ಸಂದರ್ಭದಲ್ಲಿ ಲೆಕ್ಕ ಪರಿಶೋಧಕರಾದ ಉಮೇಶ ರಾವ್ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಜಯಂತಿ ಎಸ್. ಬಂಗೇರ ಪ್ರಾರ್ಥಿಸಿದರು. ಸದಾನಂದ ನಾರಾವಿ ಕಾರ್ಯಕ್ರಮ ನಿರೂಪಿಸಿದರು. ಚಂದ್ರಹಾಸ ದೇವಾಡಿಗ ಸ್ವಾಗತಿಸಿ ಯತಿರಾಜ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ