ಮಂಗಳೂರು: ಬೆಂಗಳೂರು-ಮೈಸೂರು-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು ಪುಣ್ಯಕ್ಷೇತ್ರ ಮುರ್ಡೇಶ್ವರದವರೆಗೆ ವಿಸ್ತರಣೆಗೊಳ್ಳುವ ಮೂಲಕ ರಾಜಧಾನಿ, ಸಾಂಸ್ಕೃತಿಕ ರಾಜಧಾನಿ, ಕರಾವಳಿ ಹಾಗೂ ಪುಣ್ಯಕ್ಷೇತ್ರದ ಪ್ರಯಾಣಿಕರ ಹಲವು ದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹರ್ಷ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ನಳಿನ್ ಕುಮಾರ್ ಕಟೀಲು ಅವರು ಈ ನಿಟ್ಟಿನಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಗಮನ ಸೆಳೆದು ನಿರಂತರ ಪ್ರಯತ್ನದ ಮೂಲಕ ಜನತೆಗೆ ಅನುಕೂಲ ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನವ ಭಾರತದಲ್ಲಿ ದೇಶದ ಮೂಲೆ ಮೂಲೆಯೂ ಬೆಸೆದುಕೊಳ್ಳುತ್ತಿದೆ. ಇವರೆಲ್ಲರಿಗೂ ಸಮಸ್ತ ನಾಗರಿಕರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಶಾಸಕರು ತಿಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ