ಮೈಸೂರು: ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಅಂಗವಾಗಿ ಮೈಸೂರಿನ ಚಾಮರಾಜ ಜೋಡಿ ರಸ್ತೆಯ ವೇಂಕಟಾಚಲ ಧಾಮದಲ್ಲಿ ಶ್ರೀ ವಿದ್ಯೇಶತೀರ್ಥ ಸ್ವಾಮಿಗಳಿಂದ ಪ್ರತಿಷ್ಠಾಪಿಸಿರುವ ಶ್ರೀನಿವಾಸ ದೇವರಿಗೆ ಮತ್ತು ರಾಯರ ಮೃತ್ತಿಕಾ ವೃಂದಾವನಕ್ಕೆ ವಿಶೇಷ ಪೂಜಾದಿಗಳು ನೆರವೇರಿದವು.
ಶುಕ್ರವಾರ ಬೆಳಗ್ಗೆ ಅಷ್ಟೋತ್ತರ ಪಾರಾಯಣ ನಂತರ ರಾಯರ ವೃಂದಾವನಕ್ಕೆ ಪಂಚಾಮೃತಾಭಿಷೇಕ, ಎಳನೀರು ಅಭಿಷೇಕ ಮಾಡಲಾಯಿತು. ನಂತರ ಹೂವಿನ ಅಲಂಕಾರ ಹಾಗೂ ಮಹಾಮಂಗಳಾರತಿ ನೆರವೇರಿತು. ಸಂಜೆ ಪ್ರಾಕಾರ ಉತ್ಸವ, ಅಷ್ಟಾವಧಾನ ಸೇವೆ ಮತ್ತು ರಂಗಪೂಜೆ ಸಂಪನ್ನಗೊಂಡಿತು. ಪ್ರಧಾನ ಅರ್ಚಕ ರಾಘವೇಂದ್ರಾಚಾರ್ ಪೂಜಾಕಾರ್ಯದ ನೇತೃತ್ವ ವಹಿಸಿದ್ದರು.
ಮಠದ ವ್ಯವಸ್ಥಾಪಕರಾದ ರಾಘಣ್ಣ, ಗಿರೀಶ ಆಚಾರ್ಯ ಇತರರು ಇದ್ದರು. ನೂರಾರು ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಉತ್ತರ ಆರಾಧನೆ: ಶನಿವಾರ ವೆಂಕಟಾಚಲ ಧಾಮದಲ್ಲಿ ರಾಘವೇಂದ್ರ ಸ್ವಾಮಿಗಳ ಉತ್ತರ ಆರಾಧನೆ ನೆರವೇರಲಿದೆ. ಬೆಳಗ್ಗೆ ರಾಯರ ವೃಂದಾವನಕ್ಕೆ ಅಭಿಷೇಕ ಮತ್ತು ಪಾರಾಯಣಗಳು ಆಯೋಜನೆಗೊಂಡಿವೆ.
ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಅಂಗವಾಗಿ ಚಾಮರಾಜ ಜೋಡಿ ರಸ್ತೆಯ ವೇಂಕಟಾಚಲ ಧಾಮದಲ್ಲಿ ಶ್ರೀನಿವಾಸ ದೇವರಿಗೆ ಮತ್ತು ರಾಯರ ಮೃತ್ತಿಕಾ ವೃಂದಾವನಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ