ತೈಹೆಯೊ ಮತ್ತು ಪ್ರೊಮ್ಯಾಕ್ ಸಂಸ್ಥೆಗಳ ಮುಖ್ಯಸ್ಥರ ನಿಟ್ಟೆ ಭೇಟಿ

Upayuktha
0


ನಿಟ್ಟೆ: ಜಪಾನ್ ನ ತೈಹೆಯೊ ಎಂಜಿನಿಯರಿಂಗ್ ಕಾರ್ಪೊರೇಷನ್ ನ ಹಿರಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ಮಿಯಾಕೆ ಯೋಶಿಹಿಸಾ ಮತ್ತು ಪ್ರೊಮ್ಯಾಕ್ ಎಂಜಿನಿಯರಿಂಗ್ ಇಂಡಸ್ಟ್ರೀಸ್ ಲಿಮಿಟೆಡ್ ನ ವಾಣಿಜ್ಯ ವಿಭಾಗದ ನಿರ್ದೇಶಕ ಶ್ರೀ ಕುನಾಲ್ ರೆಡ್ಡಿ ಅವರು ಸೆಪ್ಟೆಂಬರ್ 25 ಮತ್ತು 26 ರಂದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ಮತ್ತು ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಗೆ ಭೇಟಿ ನೀಡಿ ತರಬೇತಿ ಮತ್ತು ಉದ್ಯೋಗದ ವಿಷಯದಲ್ಲಿ ಬಿ.ಟೆಕ್ ಮತ್ತು ಎಂ.ಟೆಕ್ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಹಯೋಗದ ಬಗೆಗೆ ನಿಟ್ಟೆ ವಿದ್ಯಾಸಂಸ್ಥೆಯ ಆಡಳಿತ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು.


ಕಾರ್ಯಕ್ರಮದಲ್ಲಿ ನಿಟ್ಟೆಯ ಆಡಳಿತ ವಿಭಾಗದ ಪ್ರೊ-ಚಾನ್ಸಲರ್ ವಿಶಾಲ್ ಹೆಗ್ಡೆ, ನಿಟ್ಟೆ ವಿವಿ ಕುಲಪತಿ ಡಾ.ಎಂ.ಎಸ್.ಮೂಡಿತ್ತಾಯ, ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ನಿರಂಜನ್ ಎನ್.ಚಿಪ್ಲುಂಕರ್, ನಿಟ್ಟೆ ವಿವಿಯ ಅಂತಾರಾಷ್ಟ್ರೀಯ ಸಹಯೋಗ ನಿರ್ದೇಶಕ ಪ್ರೊ.ಹರಿಕೃಷ್ಣ ಭಟ್, ಕೌನ್ಸೆಲಿಂಗ್, ವೆಲ್ಫೇರ್, ಟ್ರೈನಿಂಗ್ ಮತ್ತು ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥ ಭರತ್ ಜಿ.ಕುಮಾರ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಶ್ರೀನಿವಾಸ್ ಪೈ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತಾರಾಷ್ಟ್ರೀಯ ಸಹಯೋಗ ವಿಭಾಗದ ಎಕ್ಸಿಕ್ಯೂಟಿವ್ ಎಸಿಸ್ಟೆಂಟ್ ಯಸುಕೊ ಸಾಟೊ ಹಾಗೂ ಅಂತಾರಾಷ್ಟ್ರೀಯ ಸಹಯೋಗ ವಿಭಾಗದ ಸಹಾಯಕ ನಿರ್ದೇಶಕ ಡಾ.ಸೈಯದ್ ಅಹ್ಮದ್ ಅತಿಥಿಗಳೊಂದಿಗೆ ಸಂವಾದ ನಡೆಸಿದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


web counter      

Post a Comment

0 Comments
Post a Comment (0)
To Top