ಪಣಜಿ: ಗೋವಾದ ಮಾಪ್ಸಾದಲ್ಲಿ ಕಳೆದ ಅನೇಕ ವರ್ಷಗಳಿಂದ ಕವಿಶೈಲ ಕನ್ನಡ ಸಂಘದ ವತಿಯಿಂದ ಕನ್ನಡ ಗಣಪನನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಕನ್ನಡ ಗಣಪನ ದರ್ಶನಕ್ಕೆ ಗೋವಾದ ಮೂಲೆ ಮೂಲೆಯಲ್ಲಿ ಕನ್ನಡಿಗರು ಹಾಗೂ ಗೋವನ್ನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಪ್ರತಿದಿನ ವಿವಿಧ ಕಾರ್ಯಕ್ರಮಗಳನ್ನು, ವಿಶೇಷ ಪೂಜೆಯನ್ನು ನೆರವೇರಿಸಲಾಗುತ್ತಿದೆ ಎಂದು ಕವಿಶೈಲ ಕನ್ನಡ ಸಂಘದ ಅಧ್ಯಕ್ಷ ಶಂಭು ಶೆಟ್ಟರ್ ನುಡಿದರು.
ಮಾಪ್ಸಾದಲ್ಲಿ ಕವಿಶೈಲ ಕನ್ನಡ ಸಂಘದ ವತಿಯಿಂದ ಕನ್ನಡ ಗಣಪನನ್ನು ಪ್ರತಿಷ್ಠಾಪಿಸಲಾಗಿದೆ. ಈ ಕುರಿತು ಸುದ್ಧಿಗಾರರಿಗೆ ಸಂಘದ ಅಧ್ಯಕ್ಷ ಶಂಭು ಶೆಟ್ಟರ್ ಮಾಹಿತಿ ನೀಡಿ- ಪ್ರತಿ ವರ್ಷದಂತೆಯೇ 9 ದಿನಗಳ ಕಾಲ ಗಣೇಶನ ವಿಶೇಷ ಪೂಜೆ ನಡೆಯಲಿದೆ. ಪ್ರತಿದಿನ ವಿಶೇಷ ಪೂಜೆ, ಆರತಿ, ಅನ್ನಪ್ರಸಾದ ಕಾರ್ಯಕ್ರಮಗಳು ನಡೆಯುತ್ತಿದೆ. ಗಣೇಶನ ವಿಸರ್ಜನೆಯ ವೇಳೆ ಸಂಜೆ ಕರ್ನಾಟಕದ ವಿವಿಧ ಭಾಗಗಳಿಂದ ಆಗಮಿಸಲಿರುವ ಡೊಳ್ಳು, ವಾದ್ಯ, ಮೆರವಣೆಯ ಮೂಲಕ ಗಣೇಶನನ್ನು ವಿಸರ್ಜನೆ ಮಾಡಲಾಗುವುದು. ಈ ಎಲ್ಲ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕವಿಶೈಲ ಕನ್ನಡ ಸಂಘದ ಅಧ್ಯಕ್ಷ ಶಂಭು ಶೆಟ್ಟರ್ ಮನವಿ ಮಾಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ