ನಿಟ್ಟೆ ಕ್ಯಾಂಪಸ್‌ನಲ್ಲಿ ಸಂಭ್ರಮದ ಶ್ರೀ ಕೃ‍ಷ್ಣಜನ್ಮಾ‍ಷ್ಟಮಿ ಆ‍ಚರಣೆ

Upayuktha
0


ನಿಟ್ಟೆ: ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಲಯದ ವತಿಯಿಂದ ನಿಟ್ಟೆ ಕ್ಯಾಂಪಸ್ ನಲ್ಲಿ ಸೆ.7ರಂದು ಸದಾನಂದ ಸಭಾಂಗಣದಲ್ಲಿ ಶ್ರೀ ಕೃ‍ಷ್ಣಜನ್ಮಾ‍ಷ್ಟಮಿ ಹಬ್ಬವನ್ನು ವಿಜೃಂಭಣೆ ಹಾಗೂ ವಿಭಿನ್ನವಾಗಿ ಆ‍ಚರಿಸಲಾಯಿತು.


ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ| ನಿರಂಜನ್ ಎನ್ ಚಿಪ್ಳೂಣ್ಕರ್, ಕ್ಯಾಂಪಸ್ ಮೈಂಟೆನೆನ್ಸ್ & ಡೆವಲಪ್ಮೆಂಟ್ ವಿಭಾಗದ ನಿರ್ದೇಶಕ ಎ. ಯೋಗೀಶ್ ಹೆಗ್ಡೆ, ಉಪಪ್ರಾಂಶುಪಾಲ ಡಾ| ಶ್ರೀನಿವಾಸ ರಾವ್ ಬಿ ಆರ್, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸೆಂಟರ್‌ನ ಡೆಪ್ಯೂಟಿ ರಿಜಿಸ್ಟ್ರಾರ್ ಡಾ| ರೇಖಾ ಭಂಡಾರ್ಕರ್, ಪರೀಕ್ಷಾಂಗ ವಿಭಾಗದ ನಿಯಂತ್ರಕ ಡಾ| ಸುಬ್ರಹ್ಮಣ್ಯ ಭಟ್, ವಿದ್ಯಾರ್ಥಿ ನಿಲಯಗಳ ಚೀಫ್ ವಾರ್ಡನ್ ಗಳಾದ ಡಾ|ವೀಣಾದೇವಿ ಶಾಸ್ತ್ರೀಮಠ್, ಡಾ|ವಿಶ್ವನಾಥ್, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ಗೋವರ್ಧನ ಗಿರಿ ಹಾಗೂ ಕಾಳಿಂಗಮರ್ಧನ ಮುಂತಾದ ಅಂಶಗಳನ್ನೊಳಗೊಂಡ ಜೀವನ ಚರಿತ್ರಾ ಕಥಾನಕವನ್ನು ಆಡಿತೋರಿಸಿದರು. ಬಾಲಕಿಯರ ವಿದ್ಯಾರ್ಥಿ ನಿಲಯದ ಚೀಫ್ ವಾರ್ಡನ್ ಡಾ|ವೀಣಾದೇವಿ ಶಾಸ್ತ್ರೀಮಠ್ ಹಾಗೂ ಬಾಲಕರ ವಿದ್ಯಾರ್ಥಿ ನಿಲಯದ ಚೀಫ್ ವಾರ್ಡನ್ ಡಾ|ವಿಶ್ವನಾಥ್ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top