ವಿಜಯ ಮುರಾರಿ ಟಿ. ಅವರಿಗೆ ಡಾಕ್ಟರೇಟ್ ಪದವಿ

Upayuktha
0


ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ವಿಜಯ ಮುರಾರಿ ಟಿ. ಅವರು 'ಸೆಲೆಕ್ಟಿವ್ ಎನ್ಕ್ರಿಪ್ಶನ್ ಆಫ್ ವಿಡಿಯೋ ಫ್ರೇಮ್ಸ್ ಫಾರ್ ಅಥಂಟಿಕೇಟೆಡ್ ಸ್ಟ್ರೀಮೀಂಗ್ ಇನ್ ದ ಕಂಟೆಂಟ್ ಡೆಲಿವರಿ ನೆಟ್ವರ್ಕ್' ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಭಂದಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ನೀಡಿದೆ.


ಇವರು ಹಾಸನದ ಮೊಸಳೆ ಹೊಸಹಳ್ಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ| ಕೆ ಸಿ ರವಿಶಂಕರ್ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ನಡೆಸಿದ್ದರು. ವಿಜಯ ಮುರಾರಿ ಟಿ ಅವರು ಪುತ್ತೂರಿನ ಸರ್ವೆ ನಿವಾಸಿ ಟಿ. ಗೋಪಾಲಕೃಷ್ಣ ಭಟ್ ಹಾಗೂ ಟಿ. ವಸಂತಿ ಜಿ ಭಟ್ ಅವರ ಪುತ್ರ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top