ಮೈಸೂರು: ಇತ್ತೀಚಿನ ದಿನಗಳಲ್ಲಿ ಪ್ರೀತಿಯ ಹೆಸರಲ್ಲಿ ಲವ್ ಜಿಹಾದ್ ಮೊದಲಾದವುಗಳಿಗೆ ನಮ್ಮ ವಿಪ್ರ ಯುವತಿಯರು ಹೆಚ್ಚಾಗಿ ಬಲಿಯಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುವುದರ ಜೊತೆಗೆ ಬ್ರಾಹ್ಮಣ ಸಂಸ್ಕೃತಿ ಭವಿಷ್ಯಕ್ಕೇ ಅಪಾಯ ಎದುರಾಗುತ್ತಿದೆ. ನಮ್ಮ ಯುವತಿಯರನ್ನು ಅಂಥಹ ವಿಲಕ್ಷಣ ಮತ್ತು ಅಪಾಯಕಾರಿ ಬೆಳವಣಿಗೆಗಳಿಂದ ಉಳಿಸಿಕೊಳ್ಳುವ ಮಹತ್ವದ ಜವಾಬ್ದಾರಿಯೂ ತಾಯಂದಿರ ಮೇಲೆ ಇದೆ ಎಂದು ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತಿಳಿಸಿದರು.
ಅವರು ಮೈಸೂರಿನಲ್ಲಿ ವಿಪ್ರ ಮಹಿಳಾ ಸಂಗಮದ ಸ್ವಂತ ಕಚೇರಿಯನ್ನು ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಿದರು. ಈ ವೇಳೆ ಮುಡಾ ಮಾಜಿ ಅಧ್ಯಕ್ಷ ರಾಜೀವ್, ಸಂಸ್ಥೆಯ ಅಧ್ಯಕ್ಷೆ ಲಕ್ಷ್ಮೀ, ಮೈಸೂರು ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್ ಮೊದಲಾದವರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


