ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು , ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ಎಸ್ ಕೆಪಿಎ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯನ್ನು ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ನಡೆಸಿಕೊಟ್ಟರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


