ಉಜಿರೆ: ಶಾಂತಿಯುತ ಜಗತ್ತಿಗೆ ಉತ್ತೇಜನ ನೀಡುವ ಸಲುವಾಗಿ ವಿಶ್ವಸಂಸ್ಥೆಯು ಪ್ರತಿವರ್ಷ ಸೆಪ್ಟೆಂಬರ್ 21ರಂದು ಅಂತಾರಾಷ್ಟ್ರೀಯ ಶಾಂತಿ ದಿನಾಚರಣೆಯನ್ನು ಆಚರಿಸುತ್ತಿದೆ ಮತ್ತು ಆ ಮೂಲಕ ವಿಶ್ವ ಶಾಂತಿಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಆಡಳಿತ ಕುಲಸಚಿವೆ ಹಾಗೂ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಶಲೀಫ್ ಎ.ಪಿ. ಹೇಳಿದರು.
ಅವರು ಕಾಲೇಜಿನಲ್ಲಿ ನಡೆದ ಅಂತಾರಾಷ್ಟ್ರೀಯ ಶಾಂತಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು.
ಭಾರತ ಪೂರ್ವ ಕಾಲದಿಂದಲೂ ಶಾಂತಿಯನ್ನು ಪ್ರೋತ್ಸಾಹಿಸುತ್ತಾ ಬಂದಿದ್ದು, ಪ್ರಸ್ತುತ ಸಂದರ್ಭ ದಲ್ಲಿಯೂ ಅಂತಾರಾಷ್ಟ್ರೀಯ ಶಾಂತಿಯನ್ನು ಸ್ಥಾಪಿಸಲು ಶ್ರಮಿಸುತ್ತಿದೆ ಎಂದು ಅವರು ಹೇಳಿದರು.
ಈ ವೇಳೆ ರಾಜ್ಯಶಾಸ್ತ್ರ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಶಾಂತಿಯ ಪ್ರಾಮುಖ್ಯದ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ನಟರಾಜ್ ಎಚ್.ಕೆ. ಮತ್ತು ಭಾಗ್ಯಶ್ರೀ ಹಾಗೂ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧನ್ವಿತ ಸ್ವಾಗತಿಸಿ, ಸುಚಿತ ಧನ್ಯವಾದ ಸಮರ್ಪಿಸಿದರು. ನಿಶಾ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಚಾನೆಲ್ ಫಾಲೋ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ


